![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 9, 2022, 5:11 PM IST
ಹುಬ್ಬಳ್ಳಿ: ಜನಪ್ರತಿನಿಧಿಗಳಾಗುವವರು ಜೀವನದಲ್ಲಿ ಪ್ರಜಾಸತ್ತಾತ್ಮಕ ತತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಶ್ರಮಿಸಬೇಕು ಎಂದು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಹೇಳಿದರು.
ನವನಗರದ ಕಾನೂನು ವಿವಿಯಲ್ಲಿ ಮಂಗಳವಾರ ಬೆಂಗಳೂರಿನ ಕರ್ನಾಟಕ ಕಾನೂನು ಮತ್ತು ಸಂಸತ್ತು ಸುಧಾರಣಾ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ರಾದೇಶಿಕ ಮಟ್ಟದ ಮಾದರಿ ವಿಧಾನ ಮಂಡಲ ಅಧಿವೇಶನ ಸ್ಪರ್ಧಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಸಕ್ರಿಯವಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ತಮ್ಮ ವೃತ್ತಿ ಜೀವನವನ್ನು ಸೂಕ್ತವಾಗಿ ಕಟ್ಟಿಕೊಳ್ಳಬಹುದು ಎಂದರು.
ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಮೈಗೂಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ವಿದ್ಯಾರ್ಥಿಗಳು ಶಾಸಕಾಂಗ ಸಭೆ ಮತ್ತು ಸಂಸತ್ತಿಗೆ ಪ್ರವೇಶಿಸಿದಾಗ ಉತ್ತಮ ಚರ್ಚೆಯನ್ನು ಮಾಡಬಹುದು. ಆದ್ದರಿಂದ ವಿವಿಧ ವಿಷಯಗಳ ಕುರಿತು ಚರ್ಚಿಸುವ ಈ ಸ್ಪರ್ಧೆಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು.
ಕರ್ನಾಟಕ ಕಾನೂನು ಮತ್ತು ಸಂಸತ್ತು ಸುಧಾರಣಾ ಸಂಸ್ಥೆ ನಿರ್ದೇಶಕ ದ್ವಾರಕಾನಾಥ್ ಬಾಬು ಮಾತನಾಡಿ, ವಿಧಾನಮಂಡಲ ಅಧಿವೇಶನಗಳನ್ನು ಹೇಗೆ ನಡೆಸಬೇಕು ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅದಕ್ಕಾಗಿಯೇ ಇಂತಹ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಅದಕ್ಕಾಗಿಯೇ ಮಾದರಿ ವಿಧಾನಸಭೆ ಅಧಿವೇಶನ ಸ್ಪರ್ಧೆ ಎಂದು ಹೆಸರಿಸಲಾಗಿದೆ ಎಂದರು.
ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಯ 14 ಕಾನೂನು ಕಾಲೇಜುಗಳು, 60 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. 15 ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.ಕಾನೂನು ವಿವಿ ಕುಲಪತಿ ಪ್ರೊ| ಈಶ್ವರ ಭಟ್, ಮೌಲ್ಯಮಾಪನ ಕುಲಸಚಿವ ಡಾ|ಜಿ.ಬಿ. ಪಾಟೀಲ, ಡಾ| ರತ್ನಾ ಭರಮಗೌಡರ, ಡಿ. ರಂಗಸ್ವಾಮಿ, ಎನ್ನೆಸ್ಸೆಸ್ ಸಂಯೋಜಕ ರಾಜೇಂದ್ರ ಹಿಟ್ಟಣಗಿ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.