ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಹಾಲುಗೆನ್ನೆಯ ಕಂದ
Team Udayavani, Oct 28, 2022, 1:03 PM IST
ಹುಬ್ಬಳ್ಳಿ: ಜ್ಞಾಪಕ ಶಕ್ತಿಯಿಂದಾಗಿ 1 ವರ್ಷ 10 ತಿಂಗಳ ಮಗುವೊಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರ್ಪಡೆಯಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಬುಡರಕಟ್ಟಿಯ ಆರ್ನಾ ಪಾಟೀಲ ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿದ್ದಾಳೆ.
ತರಕಾರಿ, ಹಣ್ಣು, ಪ್ರಾಣಿಗಳ ಹೆಸರು, ಕನ್ನಡ ಹಾಗೂ ಇಂಗ್ಲಿಷ್ ವರ್ಣಮಾಲೆ ಗುರುತಿಸುವುದು ಹಾಗೂ ಹೇಳುತ್ತಾಳೆ. ಇನ್ನೂ ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳ ಹೆಸರು ಹಾಗೂ ಗುರುತಿಸುತ್ತಾಳೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಗುವಿನ ತಂದೆ ಸಿದ್ರಾಮಗೌಡ ಪಾಟೀಲ, ಅವಳ ಮೇಲೆ ಯಾವುದೇ ಒತ್ತಡ ಹಾಕದೆ ಅವಳ ಇಷ್ಟಕ್ಕೆ ಬಿಟ್ಟಿದ್ದೇವೆ. ಅವಳ ಜ್ಞಾಪಕ ಶಕ್ತಿ ಕುರಿತು ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ತಿಳಿಸಿದಾಗ ಸಂಪೂರ್ಣ ವಿಡಿಯೋ ಮಾಡಿ ಕಳುಹಿಸಲು ತಿಳಿಸಿದ್ದರು. ಅದರಂತೆ ಕಳುಹಿಸಿದ್ದೆವು ಎಂದರು.
ತಾಯಿ ವಿದ್ಯಾಶ್ರೀ ಪಾಟೀಲ ಮಾತನಾಡಿ, ಮನೆಕೆಲಸ ನಂತರ ಮಗಳಿಗೆ ವಸ್ತುಗಳನ್ನು, ಪ್ರಾಣಿಗಳನ್ನು ಕಣ್ಣಿಗೆ ಕಾಣುವ ವಸ್ತುಗಳ ಬಗ್ಗೆ ಹೇಳಿ ಅವಳಿಂದ ಹೇಳಿಸುವ ಪರಿಪಾಠ ರೂಢಿಸಿಕೊಂಡಿದ್ದೆ. ಒಂದೆರಡು ಬಾರಿ ಹೇಳಿದ್ದನ್ನು ನೆನಪಿನಲ್ಲಿಟ್ಟುಕೊಂಡು ಆಗಾಗ ಹೇಳುತ್ತಿರುವುದು ಅಚ್ಚರಿ ಎನ್ನಿಸಿತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.