ರೈತರ ಬೆಂಬಲಿಸಿ ಜೆಡಿಎಸ್ ಪ್ರತಿಭಟನೆ
Team Udayavani, Jan 27, 2021, 7:38 PM IST
ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ, ರೈತ ವಿರೋ ಧಿ ನೀತಿ ಖಂಡಿಸಿ ಮಂಗಳವಾರ ಜೆಡಿಎಸ್ ಪ್ರತಿಭಟನೆ ನಡೆಸಲಾಯಿತು.
ಇಂದಿರಾ ಗಾಜಿನಮನೆ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಲ್ಯಾಮಿಂಗ್ಟನ್ ರಸ್ತೆ ಮೂಲಕ ಮರಳಿ ಕಿತ್ತೂರು ಚನ್ನಮ್ಮವೃತ್ತಕ್ಕೆ ಆಗಮಿಸಿ ಅಂತ್ಯಗೊಂಡಿತು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ರೈತರ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ರೈತರ ಬೇಡಿಕೆಗಳ ಈಡೇರಿಕೆಗೆ ಸರಕಾರ ಮುಂದಾಗಬೇಕು ಮತ್ತು ರೈತ ವಿರೋ ಧಿ ಕಾಯ್ದೆಗಳನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಸಂವಿಧಾನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಿ: ನ್ಯಾ| ನರೇಂದರ್
ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರೈತರ ಬೇಡಿಕೆಗಳ ಈಡೇರಿಕೆಕೇಂದ್ರ ಸರಕಾರ ಮುಂದಾಗಬೇಕು. ಸರಕಾರಗಳು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಬಾರದು. ಪ್ರತಿಭಟನೆಗೆ ಆಗಮಿಸುತ್ತಿರುವ ರೈತರ ಟ್ರಾಕ್ಟರ್ ವಶಪಡಿಸಿಕೊಂಡಿದ್ದು ಕೂಡಲೇ ಅವುಗಳನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು. ಶಿವಣ್ಣ ಹುಬ್ಬಳ್ಳಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.