ಸಿಎಂ ಬದಲಾವಣೆ ಇಲ್ಲ : ಪ್ರಹ್ಲಾದ್ ಜೋಶಿ ಸ್ಪಷ್ಟನೆ
Team Udayavani, Dec 25, 2021, 11:47 AM IST
ಹುಬ್ಬಳ್ಳಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರದ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ರಾಜ್ಯದಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವದಂತಿ ಹಿನ್ನೆಲೆಯಲ್ಲಿ ಜೋಷಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಆ ಬಗ್ಗೆ ಹೈಕಮಾಂಡ್ ಹಂತದಲ್ಲಂತೂ ಯಾವುದೇ ಮಾತುಕತೆಯಾಗಿಲ್ಲ. ಇಂಥ ಚರ್ಚೆಗಳನ್ನು ನಡೆಸುವುದು ತಪ್ಪು. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತಾ ತಿಳಿಸಿದ್ದಾರೆ.
ಇದನ್ನೂ ಓದಿ : ದೇಶವೆಂಬ ವೃಕ್ಷಕ್ಕೆ ಮತಾಂತರ ಗೆದ್ದಲಿನ ರೀತಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಮಂಡಿನೋವಿನ ಶಸ್ತ್ರಚಿಕಿತ್ಸೆಗೆ ವಿದೇಶಕ್ಕೆ ಹೋಗಲಿದ್ದಾರೆ ಎಂಬ ಚರ್ಚೆಗೆ ಸಿಎಂ ಬೊಮ್ಮಾಯಿ ಶುಕ್ರವಾರ ಅಂತ್ಯ ಹಾಡಿದ್ದರು. ಈಗ ಮುಖ್ಯಮಂತ್ರಿ ಬದಲಾವಣೆ ವದಂತಿಯನ್ನು ಜೋಷಿ ನಿರಾಕರಿಸಿರುವುದರಿಂದ ಪಕ್ಷದ ವಲಯದಲ್ಲಿ ಇನ್ನಾದರೂ ಗುಸು ಗುಸು ಸುದ್ದಿ ನಿಲ್ಲಲಿದೆಯೇ ? ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.