Karnataka 2nd PUC Result 2024: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಎ.ವಿದ್ಯಾಲಕ್ಷ್ಮಿ
Team Udayavani, Apr 10, 2024, 2:01 PM IST
ಹುಬ್ಬಳ್ಳಿ: ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾಳೆ.
ಮೊದಲ ರ‍್ಯಾಂಕ್ ಪಡೆದಿರುವ ಎ.ವಿದ್ಯಾಲಕ್ಷ್ಮಿ ಇಲ್ಲಿನ ಬೈರೇದೇವರಕೊಪ್ಪದ ಚೌಗುಲ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ.
ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ಇಂಗ್ಲೀಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದರು. 600 ಅಂಕಗಳಿಗೆ 598 ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾಲಕ್ಷ್ಮಿ ಪ್ರಾಥಮಿಕ ಹಂತದಿಂದಲೂ ಓದಿನಲ್ಲಿ ಮುಂದೆ ಇದ್ದ ವಿದ್ಯಾರ್ಥಿನಿ. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇಕಡಾ 97 ರಷ್ಟು ಅಂಕ ಪಡೆದಿದ್ದಳು. ತಂದೆ ಎಸ್. ಅಖಿಲೇಶ್ವರನ್ ಹಿರಿಯ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಹ ತಮಿಳುನಾಡು ರಾಜ್ಯದವರಾದ ಇವರು 2002 ರಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.