Sanatan Dharma: ನನ್ನ ಅಭಿಪ್ರಾಯ ಹೇಳಿದ್ದೇನೆ, ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ: ಪರಂ
Team Udayavani, Sep 8, 2023, 10:11 AM IST
ಹುಬ್ಬಳ್ಳಿ: ನಾನು ಸನಾತನ ಧರ್ಮದ ಬಗ್ಗೆ ತಪ್ಪು ಅರ್ಥ ಬರುವ ರೀತಿಯಲ್ಲಿ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡಲ್ಲ. ನಾನು ಸಮಯ, ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೆ ಮಾತನಾಡುತ್ತಾರೆ. ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡಲ್ಲ. ಪ್ರಧಾನಿ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತನಾಡಿದ್ದಾರೆ ಎಂದರು.
ಬಿಜೆಪಿಯವರು ಹೋರಾಟ ಮಾಡಲಿ ನಾವು ಪ್ರತ್ಯುತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಉತ್ತರ ಕೊಡುತ್ತಾರೆ ಎಂದರು.
ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಇದೇಯಾ ಎಂದು ಪ್ರಶ್ನಿಸಿದರು.
ಬರಗಾಲದ ಬಗ್ಗೆ ಸಂಪುಟ ಸಭೆಯಲ್ಲಿ ನಲ್ಲಿ ಚರ್ಚೆಯಾಗಿದೆ. ಶೀಘ್ರವೇ ಬರಗಾಲ ಘೋಷಣೆ ಮಾಡಲಾಗವುದು. ಜೊತೆಗೆ ಕೇಂದ್ರಕ್ಕೂ ವರದಿ ಕಳಿಸುತ್ತೇವೆ ಎಂದರು.
ಗದಗನಲ್ಲಿ ಹೊಸದಾಗಿ ಕಮಾಂಡೋ ಸೆಂಟರ್ ಮಾಡಿದ್ದಾರೆ. ಹೀಗಾಗಿ ಗದಗ ಹೋಗುತ್ತಿದ್ದೇನೆ ಎಂದರು.
ಇದನ್ನೂ ಓದಿ: G20 Summit: ಬಿಗಿ ಭದ್ರತೆಯೊಂದಿಗೆ ವಿವಿಧ ದೇಶಗಳ ಗಣ್ಯರ ಸ್ವಾಗತಕ್ಕೆ ಸಜ್ಜಾಗಿದೆ ದೆಹಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.