ಪಂಚಾಚಾರ್ಯರಿಗೆ ಸಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಕೀರ್ತಿ
Team Udayavani, Apr 4, 2022, 11:47 AM IST
ಹುಬ್ಬಳ್ಳಿ: ಸಾತ್ವಿಕ ಮತ್ತು ತಾತ್ವಿಕ ಬೋಧನೆಗಳ ಮೂಲಕ ಭಾವೈಕ್ಯತೆ ಬೋಧಿಸಿದ, ಸಕಲರ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರಿಗೆ ಸಲ್ಲುತ್ತದೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
ತಡಸ ಕ್ರಾಸ್ ಬಳಿಯ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಯುಗಾದಿ ಹೊಸ ವರ್ಷದಂದು ಪ್ರತಿವರ್ಷ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವ ಸತ್ಪರಂಪರೆಯಿದೆ. ಯುಗ ಯುಗಗಳ ಚಾರಿತ್ರಿಕ ಇತಿಹಾಸ ಹೊಂದಿದ ಪಂಚಾಚಾರ್ಯರು ಮಾನವ ಜೀವನ ಪರಿಪೂರ್ಣತೆಯೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ಅಸ್ಪೃಶ್ಯೋದ್ಧಾರ ಮತ್ತು ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ಮೊಟ್ಟ ಮೊದಲಿಗೆ ಕಲ್ಪಿಸಿಕೊಟ್ಟ ಶ್ರೇಯಸ್ಸು ಅವರದು ಎಂದರು.
ಮುಕ್ತಿಮಂದಿರ ಕ್ಷೇತ್ರದ ಪಟ್ಟಾಧ್ಯಕ್ಷ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಸಮಾರಂಭ ಉದ್ಘಾಟಿಸಿ ಮತನಾಡಿ, ಯುಗಾದಿ ಹೊಸ ವರುಷದಲ್ಲಿ ಸೃಷ್ಟಿ ಹೊಸ ಚೈತನ್ಯ ಪಡೆಯುವಂತೆ ಮನುಷ್ಯನ ಜೀವನದಲ್ಲೂ ಸಹ ಹೊಸ ಉಲ್ಲಾಸ, ನೆಮ್ಮದಿ ಪಡೆಯಲು ಶ್ರಮಿಸಬೇಕಾಗಿದೆ. ಸಮರ ಜೀವನ ಅಮರ ಜೀವನದೆಡೆಗೆ ಕೊಂಡೊಯ್ಯಲು ಪಂಚಾಚಾರ್ಯರು ಕೊಟ್ಟ ಧರ್ಮ ಸಿದ್ಧಾಂತ ಸಕಲರ ಬಾಳಿನಲ್ಲಿ ಬೆಳಕು ಮತ್ತು ಬಲ ತಂದುಕೊಡುತ್ತದೆ ಎಂದು ಹೇಳಿದರು.
ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು, ಸೂಡಿ ಜುಕ್ತಿಹಿರೇಮಠದ ಡಾ| ಕೊಟ್ಟೂರು ಬಸವೇಶ್ವರ ಶ್ರೀಗಳು, ಮಳಲಿ ಸಂಸ್ಥಾನ ಮಠದ ಡಾ| ನಾಗಭೂಷಣ ಶ್ರೀಗಳು ವೀರಶೈವ ಧರ್ಮ, ಗುರು ಪರಂಪರೆಯ ಮಹತ್ವ, ಯುಗಾದಿ ಹೊಸ ವರುಷದ ಆಚರಣೆಯ ಮಹತ್ವ ತಿಳಿಸಿದರು.
ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ಎಂ.ಆರ್. ಪಾಟೀಲ, ಶಂಕರಗೌಡ ಸಿದ್ಧನಗೌಡರು, ಈಶ್ವರಯ್ಯ ನಾವಳ್ಳಿಮಠ, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡರ, ಜಗದೀಶ ಹಿರೇಮಠ, ಶಿವನಗೌಡ ಪಾಟೀಲ, ಪಿ.ಎಸ್. ಹಿರೇಮಠ, ಗುರುಸಿದ್ಧಯ್ಯ ಹಿರೇಮಠ, ಮಹೇಶ ಹಿರೇಮಠ ಮೊದಲಾದವರಿದ್ದರು.
ಸಮಾರಂಭಕ್ಕೂ ಮುನ್ನ ಶ್ರೀ ಜಗದ್ಗುರು ರೇಣುಕಾಚಾರ್ಯ ಭವ್ಯ ರಥೋತ್ಸವ ಸುರಶೆಟ್ಟಿಕೊಪ್ಪದ ಜಗ್ಗಲಗಿ ಮೇಳ, ಜಾನಪದ ತಂಡದವರ ವೀರಗಾಸೆ, ಭಜನಾ ಮಂಡಳಿಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.