ರಸ್ತೆಗಳಿಗೆ ರಂಗೋಲಿ; ಕಾಂಗ್ರೆಸ್ ಪ್ರತಿಭಟನೆ
ಮೂಲ ಸೌಲಭ್ಯ ಕಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟರ ವಿಫಲ-ಆರೋಪ
Team Udayavani, Apr 28, 2022, 10:36 AM IST
ಹುಬ್ಬಳ್ಳಿ: ಮೂಲ ಸೌಲಭ್ಯ ಕಲ್ಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ರಸ್ತೆಗಳಿಗೆ ರಂಗೋಲಿಯಿಂದ ಅಲಂಕಾರ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.
ಹಲವು ಸಮಸ್ಯೆಗಳ ಕುರಿತು ಸ್ಥಳೀಯರು ಶಾಸಕರು ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಹೋರಾಟಗಳನ್ನು ಕೂಡ ಮಾಡಲಾಲಾಗಿದೆ. ಆದರೆ ಜನರ ಸಮಸ್ಯೆಗಳಿಗೆ ಕಿವಿಗೊಡುವ ಕಾಳಜಿಯಿಲ್ಲದಂತಾಗಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಗಮನ ಸೆಳೆಯುವ ನಿಟ್ಟಿನಲ್ಲಿ ರಂಗೋಲಿ ಬಿಡಿಸಿ ಪ್ರತಿಭಟಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಅವರು ವಾರ್ಡ್ 58ರ ಪ್ರತಿಷ್ಠಿತ ಓಂ ಹೋಟೆಲ್ ಎದುರಿನ ಕೇಕ್ ಕಾರ್ನ್ ದಿಂದ ಸೈಂಟ್ ಮೈಕಲ್ ಸ್ಕೂಲ್ ಹತ್ತಿರದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಅದನ್ನು ಸರಿಪಡಿಸಬೇಕಾದ ಅಧಿಕಾರಿಗಳು ಇತ್ತ ಕಣ್ತೆರೆದು ನೋಡುತ್ತಿಲ್ಲ. ಜತೆಗೆ ಈ ಭಾಗದ ಶಾಸಕರು ಕಣ್ತೆರೆದು ನೋಡುತ್ತಿಲ್ಲ. ತಾವು ಓಡಾಡುವ ರಸ್ತೆಗಳನ್ನು ಹೈಟೆಕ್ ಮಾದರಿಯಲ್ಲಿ ಮಾಡಿಕೊಂಡಿದ್ದಾರೆ. ಜನರ ಸಾಮಾನ್ಯ ರಸ್ತೆಗಳ ದುಸ್ಥಿತಿ ಅವರಿಗೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೊಟ, ಸುರೇಶ, ಅಶೋಕ ನರಗುಂದ ಸೇರಿದಂತೆ ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.