ಮಹಿಳಾ ಸ್ವಾವಲಂಬನೆಗೆ ಸ್ವಉದ್ಯೋಗ ತರಬೇತಿ ಅವಶ್ಯ
ತರಬೇತಿ ಪಡೆದ 30 ಫಲಾನುಭವಿಗಳಿಗೆ ಸವಲತ್ತು ವಿತರಣೆ
Team Udayavani, Feb 1, 2022, 5:51 PM IST
ಹುಬ್ಬಳ್ಳಿ: ಮಹಿಳೆಯರು ಸ್ವ-ಉದ್ಯೋಗ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಲು ತರಬೇತಿ ಶಿಬಿರಗಳು ಅತ್ಯವಶ್ಯಕವಾಗಿವೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಅಯೋಧ್ಯೆ ನಗರ ಅಂಬೇಡ್ಕರ್ ಕಾಲೋನಿ ಡಾ| ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಕೌಶಲಾಭಿವೃದ್ಧಿ ಮತ್ತು ಆದಾಯ ಗಳಿಕೆಗಾಗಿ ಹಮ್ಮಿಕೊಂಡಿದ್ದ 30 ಫಲಾನುಭವಿಗಳಿಗೆ ತರಬೇತಿ ಶಿಬಿರ ಉದ್ಘಾಟಿಸಿ ಹಾಗೂ ತರಬೇತಿ ಪಡೆದ 30 ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಅವರು ಮಾತನಾಡಿದರು.
ಸರಕಾರಿ ಸವಲತ್ತು ಪಡೆದ ಫಲಾನುಭವಿಗಳು ಅದನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಅಧಿಕಾರಿಗಳು ಪ್ರತಿ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಪರಿಶೀಲಿಸಬೇಕು. ಇದರಿಂದ ಸವಲತ್ತುಗಳ ದುರ್ಬಳಕೆಗೆ ಕಡಿವಾಣ ಹಾಕಿದಂತಾಗಲಿದೆ ಎಂದರು.
ಲಿಡ್ಕರ ನಿಗಮದ ಅಧ್ಯಕ್ಷನಾಗಿದ್ದ ವೇಳೆ ರಾಜ್ಯದಲ್ಲಿ ಚರ್ಮ ಕೈಗಾರಿಕೆ ಪ್ರೋತ್ಸಾಹಿಸಲು ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಹೊಲಿಗೆ ಯಂತ್ರದ ಜೊತೆಗೆ ಸ್ವ ಉದ್ಯೋಗ ಕೈಗೊಳ್ಳಲು ಅಗತ್ಯ ಸಾಲ ಸೌಲಭ್ಯ, ಉತ್ಪನ್ನಗಳ ಮಾರುಕಟ್ಟೆ ಬಗ್ಗೆ ಮಾರ್ಗದರ್ಶನ ಸೇರಿದಂತೆ ಅಗತ್ಯ ಸಹಕಾರ ನೀಡಿ ಪ್ರೋತ್ಸಾಹಿಸಲು ಯೋಜನೆ ರೂಪಿಸಲಾಗಿತ್ತು ಎಂದು ಹೇಳಿದರು.
ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ಲಿಡ್ಕರ ಕಾಲೋನಿಗಳ ಪ್ರಗತಿಗೆ ವಿಶೇಷ ಆಸಕ್ತಿ ವಹಿಸಿ ಮೂಲಸೌಕರ್ಯಗಳನ್ನು ಒದಗಿಸಿದ್ದು, ನನ್ನ ಮತಕ್ಷೇತ್ರ ವ್ಯಾಪ್ತಿಯ ಢೋರಗಲ್ಲಿ ಹಾಗೂ ಘೋಡಕೆ ಓಣಿಯಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಎರಡು ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಶ್ರೀರಾಮ ಕಾಲೋನಿಯಲ್ಲಿ 2 ಕೋಟಿ ರೂ. ವೆಚ್ಚದ ಸುಸಜ್ಜಿತ ಸಮುದಾಯ ಭವನದ ಕಾಮಗಾರಿ ಪ್ರಗತಿಯಲ್ಲಿದೆ. ಅಲ್ಲದೇ, ಪಡದಯ್ಯನ ಹಕ್ಕಲದಲ್ಲಿ 9 ಕೋಟಿ ರೂ. ವೆಚ್ಚದ
ಡಾ| ಬಾಬು ಜಗಜೀವನರಾಂ ಭವನ ಕಾಮಗಾರಿ ಸಹ ಶೀಘ್ರ ಪೂರ್ಣಗೊಳ್ಳಲಿದೆ ಎಂದರು.
ಮುಖಂಡ ಗುರುನಾಥ ಉಳ್ಳಿಕಾಶಿ, ಲಿಡ್ಕರ ಅಧಿಕಾರಿ ಎ.ಎಸ್. ರುದ್ರೇಶ ಮಾತನಾಡಿದರು. ಹುಡಾ ಮಾಜಿ ಸದಸ್ಯ ಪ್ರಭು ಪ್ರಭಾಕರ, ಮುಖಂಡ ಸೈಯದ್ ಸಲೀಂ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ನಂದಾ ಹಣಬರಟ್ಟಿ, ಲಿಡ್ಕರ ಅಧಿಕಾರಿ ಮಂಜುನಾಥ, ವಿಮಲಬಾಯಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.