ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ
ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ದುರಸ್ತಿ ಮಾಡಲಾಗುವುದು
Team Udayavani, Jan 21, 2022, 5:45 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಗುರುವಾರ ಇಲ್ಲಿನ ಹಳೇಹುಬ್ಬಳ್ಳಿಯ ಅರವಿಂದ ಹಾಗೂ ಬ್ಯಾಂಕರ್ಸ್ ಕಾಲೋನಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.
ವಾರ್ಡ್ ನಂ. 42ರ ಅರವಿಂದ ನಗರದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆ ವೀಕ್ಷಿಸಿ ಮಾತನಾಡಿದ ಅವರು, ಇಲ್ಲಿನ ರಸ್ತೆ-ಒಳಚರಂಡಿ ಅಭಿವೃದ್ಧಿ ಪಡಿಸಲಾಗುವುದು. ಉದ್ಯಾನದ ಸಮಸ್ಯೆ ಬಗೆಹರಿಸಲಾಗುವುದು. ಸಾರ್ವಜನಿಕರು ಓಡಾಡಲು ಫುಟ್‌ಪಾತ್ ನಿರ್ಮಿಸಲಾಗುವುದು.
ಚನ್ನಪೇಟೆಯ ಚರಂಡಿ ಮಣ್ಣಿನಿಂದ ತುಂಬಿ ಹೋಗಿದೆ. ಈ ಚರಂಡಿಯಿಂದ ಇಲ್ಲಿನ ಜನರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿಯಲ್ಲಿನ ಹೂಳು ತೆಗೆಯಲು ಅಧಿಕಾರಿಗಳಿಗೆ ಸೂಚಿಸುವೆ. ಜಲಮಂಡಳಿ ಹಾಗೂ ಪಾಲಿಕೆ ಸದಸ್ಯರ ಜತೆ ಮಾತನಾಡಿ ವಾರ್ಡ್‌ನ ಒಳರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ದುರಸ್ತಿ ಮಾಡಲಾಗುವುದು ಎಂದರು.
ವಾರ್ಡ್ ನಂ. 40ರ ಬ್ಯಾಂಕರ್ಸ್ ಕಾಲೋನಿಗೆ ಭೇಟಿ ನೀಡಿದ ಅವರು, ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದರು. ಕಳಪೆ ಕಾಮಗಾರಿ ಕಂಡು ಬಂದರೆ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಅಭಿವೃದ್ಧಿ ಕೆಲಸಗಳಿಗೆ ಯಾವುದೇ ರೀತಿ ಅಡೆತಡೆ ಆಗದಂತೆ ಜನರು ಸಹಕರಿಸಬೇಕು. ರಸ್ತೆ ಅಗಲೀಕರಣದಿಂದ ಜನರಿಗೆ ಕೆಲವು ದಿನಗಳ ಕಾಲ ತೊಂದರೆ ಆಗಲಿದೆ. ಆದ್ದರಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ವಾರ್ಡ್ ಜನರ ಕುಂದುಕೊರತೆ ಆಲಿಸಿ, ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಮಹಾಪೌರ ಡಿ.ಕೆ.ಚವ್ಹಾಣ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಮುಖಂಡರಾದ ವಿನಾಯಕ ಕುಲಕರ್ಣಿ, ಮಹೇಂದ್ರ ಕೌತಾಳ, ಮುಕುಂದ ಗುಗ್ಗರಿ, ಶಿವನಗೌಡ ಮೊದಲಾವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.