ಕೋವಿಡ್ ಸುರಕ್ಷತಾ ಕ್ರಮದೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
Team Udayavani, Jun 18, 2020, 7:46 AM IST
ಧಾರವಾಡ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 27,841 ಮಕ್ಕಳಿಗೆ 117 ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಡಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ
ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಆಯೋಜಿಸುವುದು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ವಿಶೇಷ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು. ಜಿಲ್ಲೆಯ ಎಲ್ಲಾ ಬಿಇಒಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ ಅವರ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಸೂಕ್ಷ್ಮ ಯೋಜನೆ ಮಾಡಬೇಕು. ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಸೂಚಿಸಿದರು.
ಕೋವಿಡ್ ನಿಯಂತ್ರಣ, ಮೆಕ್ಕೆಜೋಳ ಬೆಳೆದ ರೈತರು, ಆಟೋ ಚಾಲಕರು, ಕಾರ್ಮಿಕರು, ಮೊದಲಾದ ವರ್ಗಗಳಿಗೆ ಪರಿಹಾರ ವಿತರಣೆ, ಕೈಗಾರಿಕೆಗಳ ಪುನರಾರಂಭ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಸಚಿವರು ಚರ್ಚಿಸಿದರು. ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ| ಸುಜಾತಾ ಹಸವೀಮಠ ಕೋವಿಡ್ ಅಂಕಿ-ಅಂಶ ನೀಡಿದರು. ಡಿಸಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್. ದಿಲೀಪ್, ಎಸ್‌ಪಿ ವರ್ತಿಕಾ ಕಟಿಯಾರ್, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಡಿಡಿಪಿಐ ಮೋಹನ ಹಂಚಾಟೆ ಇದ್ದರು.
ವೀಕ್ಷಕರ ನೇಮಕ
ಧಾರವಾಡ: ಜೂ. 25ರಿಂದ ಜು. 4ರ ವರೆಗೆ ಜರುಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷೆ ಸುವ್ಯವಸ್ಥಿತವಾಗಿ ಜರುಗಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಾಗೃತ ದಳಗಳನ್ನು ರಚಿಸಲಾಗಿದ್ದು, ವೀಕ್ಷಕರನ್ನೂ ನೇಮಿಸಲಾಗಿದೆ. ಜಿಲ್ಲಾಮಟ್ಟದ ಜಾಗೃತ ದಳವನ್ನು ಡಿಸಿ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕುಮಟ್ಟದ ಜಾಗೃತ ದಳವನ್ನು ಎಸಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳು ಹಾಗೂ 17 ಉಪಕೇಂದ್ರಗಳು ಇದ್ದು, ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ತಡೆಗಟ್ಟಲು ವೀಕ್ಷಕರನ್ನು, ವಿಶೇಷ ವೀಕ್ಷಕರನ್ನು ಸಹ ನೇಮಿಸಲಾಗಿದೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.