ಕಾರ್ಮಿಕ ಸಂಘಟನೆಗಳ ಮುಷ್ಕರ

ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿವೆ ಕಾರ್ಮಿಕ ಸಂಹಿತೆಗಳು: ಪತ್ತಾರ

Team Udayavani, Mar 29, 2022, 12:02 PM IST

6

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟ ರಾಷ್ಟ್ರವ್ಯಾಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮುಷ್ಕರ ನಡೆಸಲಾಯಿತು.

ಜೆಸಿಟಿಯು ಸಂಚಾಲಕ ಮಹೇಶ ಪತ್ತಾರ ಮಾತನಾಡಿ, ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿವೆ. ದೇಶದ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರಕಾರಗಳು ಮುಂದಾಗಬೇಕು. ರೈತರ ಐತಿಹಾಸಿಕ ಹೋರಾಟಕ್ಕೆ ಮಣಿದ ಮೋದಿ ಸರಕಾರ ಕೃಷಿ ಕಾನೂನುಗಳನ್ನು ವಾಪಸ್‌ ಪಡೆದಿದೆ. ಆದರೆ ಅವರದ್ದೇ ಸರಕಾರ ರಾಜ್ಯದಲ್ಲಿ ರೈತ ವಿರೋಧಿ ಎಪಿಎಂಸಿ, ಭೂ ಸುಧಾರಣಾ, ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಈ ಕಾನೂನುಗಳನ್ನು ವಾಪಸ್‌ ಪಡೆಯಲಿ. ರಾಜ್ಯ ಸರಕಾರ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡಕೂಡದೆಂದು ಒತ್ತಾಯಿಸಿದರು.

ಬೆಲೆ ಏರಿಕೆ ನಿಯಂತ್ರಣ, 26 ಸಾವಿರ ಕನಿಷ್ಟ ವೇತನ ಜಾರಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ, ಸಾರ್ವಜನಿಕ ವಲಯದ ಖಾಸಗೀಕರಣ ತಡೆಯುವುದು ಸೇರಿದಂತೆ 12 ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಪ್ರತಿಭಟನೆ ನಡೆಸಿತು.

ಸರಕಾರ ನಮ್ಮ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸದಿದ್ದರೆ ರೈತ ಕಾರ್ಮಿಕರ ಐಕ್ಯತೆಯ ಬೃಹತ್‌ ಹೋರಾಟಗಳು ದೇಶದಲ್ಲಿ ರೂಪಗೊಳ್ಳಲಿವೆ ಎಂದು ಎಚ್ಚರಿಸಿದರು. ಕಾರ್ಮಿಕ ಮುಖಂಡರಾದ ಸ್ಟಿಫನ್‌ ಜಯಚಂದ್ರ, ದೇವಾನಂದ ಜಗಾಪುರ, ಅಶೋಕ ಬಾರ್ಕಿ, ವಿ.ಕೆ. ಬನ್ನಿಗೋಳ, ಗುರುಸಿದ್ದಪ್ಪ ಅಂಬಿಗೇರ, ಎ.ಎಸ್‌.ಪೀರಜಾದೆ, ರೈತ ಮುಖಂಡ ಬಿ.ಎಸ್‌.ಸೊಪ್ಪಿನ ಮಾತನಾಡಿದರು. ಇಲ್ಲಿನ ಬಸವವನದಿಂದ ಮೆರವಣಿಗೆ ಆರಂಭವಾಯಿತು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಲಾಯಿತು.

ನಂತರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅಮೃತ ಇಜಾರಿ, ಬಾಬಾಜಾನ ಮುಧೋಳ, ಶಿವಗಂಗಾ ಹೆಬ್ಬಳ್ಳಿ, ರವೀಂದ್ರ ಪತ್ತಾರ, ಆನಂದ ಬಡಿಗೇರ, ಎಂ.ಎಚ್‌. ಮುಲ್ಲಾ, ಬಸೀರ ಮುಧೋಳ, ಹುಲಿಗೆಮ್ಮ ಚಲವಾದಿ, ಅನ್ನಪೂರ್ಣ ಕುಂಕುರಮಠ, ಬಸಣ್ಣ ನೀರಲಗಿ, ಚಿದಾನಂದ ಸವದತ್ತಿ, ದುರ್ಗಪ್ಪ ಪೂಜಾರಿ, ರಮೇಶ ಭೂಸ್ಲೆ, ಪುಂಡಲೀಕ ಬಡಿಗೇರ, ಪ್ರವೀಣ ಶಿಂಪೇರ, ದಾನಮ್ಮ ಕುಸ್ತಿ ಸೇರಿದಂತೆ ಹಮಾಲಿ, ಕಟ್ಟಡ, ಸ್ಕೀಂ ನೌಕರರು, ಬೀದಿಬದಿ ವ್ಯಾಪಾರಸ್ಥರು, ಅಟೋರಿಕ್ಷಾ ಚಾಲಕರು, ವಿವಿಧ ಫ್ಯಾಕ್ಟರಿ ಕಾರ್ಮಿಕರು, ಬ್ಯಾಂಕ್‌, ವಿಮಾ ನೌಕರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.