ದಶಕದಲ್ಲಿ ವಿಶ್ವ ನಿಬ್ಬೆರಗಾಗುವಂತೆ ದೇಶದ ಬೆಳವಣಿಗೆ-ಪಿ.ರಾಜೀವ
Team Udayavani, Mar 5, 2024, 1:50 PM IST
ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತದಿಂದಾಗಿ ದಿವಾಳಿಯಾಗಿದ್ದ ಭಾರತ ಜಗತ್ತಿಗೆ ಕೊಡುಗೆ ಕೊಡುವಷ್ಟರ ಮಟ್ಟಿಗೆ ಬೆಳೆದಿದೆ. ಕೇವಲ 10 ವರ್ಷದಲ್ಲಿ ಜಗತ್ತು ನಿಬ್ಬೆರಗಾಗಿ ನೋಡುವಷ್ಟರ ಮಟ್ಟಿಗೆ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಹೇಳಿದರು.
ಸೋಮವಾರ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸ್ಥಳೀಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಮುಖರ
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಎರಡು ಮಾತಿಲ್ಲ. ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಗೆಲುವು ಖಚಿತವಾಗಿದೆ ಎಂದರು.
ಹಿಂದೆ ಪ್ರಧಾನಿಯಾಗಿದ್ದ ದಿ| ರಾಜೀವ ಗಾಂಧಿ ಅವರೇ ದೇಶದಲ್ಲಿ ಶೇ.85 ಭ್ರಷ್ಟಾಚಾರ ನಡೆಯುತ್ತಿದೆ ಎಂದು ನೇರವಾಗಿ
ಒಪ್ಪಿಕೊಂಡಿದ್ದರು. ಆದರೆ ಇದಕ್ಕೆಲ್ಲಾ ಕಡಿವಾಣ ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ. ಕೇಂದ್ರದಿಂದ ಬಿಡುಗಡೆ ಮಾಡುವ
ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಮೂಲಕ ಯಾವುದೇ ಮಧ್ಯವರ್ತಿಗೆ ನಯಾಪೈಸೆಯೂ ಹೋಗುವುದಿಲ್ಲ. ಈ ವ್ಯವಸ್ಥೆಯು ದೇಶದಲ್ಲಿನ ಭ್ರಷ್ಟಾಚಾರ ಹಾಗೂ ಅವ್ಯವಹಾರಕ್ಕೆ ದೊಡ್ಡ ಕಡಿವಾಣ ಹಾಕಿದೆ ಎಂದು ಹೇಳಿದರು.
ಕಾಂಗ್ರೆಸ್ ತುಷ್ಟೀಕರಣ: ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಕುರಿತು ಮಾತನಾಡುವಾಗ ಹಿಂದೆಯೂ
ಘಟನೆಗಳು ನಡೆದಿದ್ದವು ಎಂದು ಹೇಳುವ ಮೂಲಕ ಘಟನೆಯನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೂ ಇದನ್ನು ಪ್ರಶ್ನೆ ಮಾಡಿದ ಮಾಧ್ಯಮದವರ ಮೇಲೆಯೇ ಗೂಬೆ ಕೂರಿಸುವ ಕೆಲಸ ಮಾಡಿದರು. ನಾವು ಖಾಸಗಿ ಪ್ರಯೋಗಾಲಯದಿಂದ ವರದಿ ತರಿಸಿದ್ದು, ಅವನು ಪಾಕಿಸ್ತಾನ ಜಿಂದಾಬಾದ್
ಕೂಗಿರುವುದು ಸತ್ಯ ಎಂಬುದು ಸಾಬೀತಾಗಿದೆ
ಎಂದರು.
ಈ ಸರಕಾರ ಬಂದ ಮೇಲೆ ಸಾಲ ಮಾಡಿ ವೇತನ, ಪೆನ್ಶನ್ ಕೊಡುತ್ತಿದೆ. ಕೆಲ ಇಲಾಖೆಯ ನೌಕರರಿಗೆ ಇನ್ನೂ ವೇತನ ಆಗುತ್ತಿಲ್ಲ.
ಸಮಾಜದ ಕಟ್ಟಕಡೆಯ ಬಡವನ ಮೇಲೂ ಸಾಲ ಹೊರಿಸಿದ್ದಾರೆ. ಕೈಗಾರಿಕಾ ಅಭಿವೃದ್ಧಿ ಕುಸಿದಿದೆ. ಪ್ರತಿಯೊಂದಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದ್ಯಾಕೆ? ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ವಿಧಾನಪರಿಷತ್ತು ಸದಸ್ಯ ಹಾಗೂ ಕ್ಲಸ್ಟರ್ ಸಂಚಾಲಕ ನವೀನ, ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ಮಹಾನಗರ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕಿ ಸೀಮಾ ಮಸೂತಿ, ಶಶಿಮೌಳಿ ಕುಲಕರ್ಣಿ, ಮಾಜಿ ಅಧ್ಯಕ್ಷರಾದ ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ, ವಿಜಯಾನಂದ ಶೆಟ್ಟಿ ಇನ್ನಿತರರಿದ್ದರು.
ಚುನಾವಣೆಗೆ ಬಿಜೆಪಿ ಸಂಪೂರ್ಣ ಸಿದ್ಧವಾಗಿದೆ. ಅಭಿವೃದ್ಧಿ ಚುನಾವಣೆಯ ವಿಷಯ ವಸ್ತು. ಪ್ರಧಾನಿ ನರೇಂದ್ರ ಮೋದಿ
ಚುನಾವಣೆಯ ಕೇಂದ್ರಬಿಂದು. ಈ ಎರಡು ವಿಷಯಗಳ ಮೇಲೆ ಸಂಘಟಿತ ಕಾರ್ಯಕರ್ತರ ಪಡೆಯಿನ್ನಿಟ್ಟುಕೊಂಡು ಚುನಾವಣೆ
ಎದುರಿಸುತ್ತೇವೆ.
ಪಿ.ರಾಜೀವ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.