ಅಮೃತ ಸರೋವರದಲ್ಲಿ ಭ್ರಷ್ಟಾಚಾರದ ವಿಷ?

ಎನ್‌ಎಂಆರ್‌ ನಲ್ಲಿ ಈಗಾಗಲೆ ಕೂಲಿ ಮೊತ್ತ 1,49,247 ರೂ. ಖರ್ಚು ಹಾಕಲಾಗಿದೆ

Team Udayavani, Sep 3, 2022, 11:24 AM IST

ಅಮೃತ ಸರೋವರದಲ್ಲಿ ಭ್ರಷ್ಟಾಚಾರದ ವಿಷ?

ಕುಂದಗೋಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿಗಳು ಅಮೃತ ಸರೋವರ ಯೋಜನೆ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಪ್ರತಿ ಕೆರೆಗೆ 39 ಲಕ್ಷ ರೂ. ಬಿಡುಗಡೆಗೊಳಿಸಿದ್ದಾರೆ. ಆದರೆ ತಾಲೂಕಿನ ಗುಡೇನಕಟ್ಟಿ ಗ್ರಾಪಂ ವ್ಯಾಪ್ತಿಯ ಅಲ್ಲಾಪುರ ಕೆರೆ ಅಭಿವೃದ್ಧಿಗೊಳಿಸದೆ 26 ಲಕ್ಷ ರೂ. ಸಾಮಗ್ರಿ ವೆಚ್ಚ ಹಾಕಲಾಗಿದೆ ಎಂಬ ದೂರು ಕೇಳಿಬರುತ್ತಿದೆ.

ಕೆರೆಗಳು ಅಭಿವೃದ್ಧಿಗೊಂಡರೆ ಅಂತರ್ಜಲಮಟ್ಟ ಹೆಚ್ಚಿ ರೈತರಿಗೆ-ಸಾರ್ವಜನಿಕರಿಗೆ ಅನುಕೂಲವಾಗು ತ್ತದೆ. ಈ ದೃಷ್ಟಿಕೋನದಿಂದ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅಮೃತ ಸರೋವರ ಯೋಜನೆಯ ಅನುದಾನ ತಾಲೂಕಿನಲ್ಲಿ ನುಂಗುವವರ ಪಾಲಾಗುತ್ತಿದೆ ಎಂಬ ಆರೋಪ ದಟ್ಟವಾಗುತ್ತಿದೆ.

ಆ.15ರಂದು ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಲ್ಲಿ ಧ್ವಜಾರೋಹಣ ಮಾಡಬೇಕೆಂಬುದು ಸಿಎಂ ಅವರ ಕನಸಾಗಿತ್ತು. ಅದರಂತೆ ಈಗಾಗಲೆ ಈ ಗ್ರಾಮದಲ್ಲಿ ಅರೆಬರೆ ಕೆಲಸ ಮಾಡಿ ಎನ್‌ಎಂಆರ್‌ ನಲ್ಲಿ ಈಗಾಗಲೆ ಕೂಲಿ ಮೊತ್ತ 1,49,247 ರೂ. ಖರ್ಚು ಹಾಕಲಾಗಿದೆ. ಅದರಂತೆ ಸಾಮಗ್ರಿಗಳ ಮೊತ್ತ 26 ಲಕ್ಷ ರೂ.ಗಳನ್ನು ಖರ್ಚು ಹಾಕಿದ್ದಾರೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಹಣವನ್ನು ಖರ್ಚು ಹಾಕಿರುವುದು ಬೆಳಕಿಗೆ ಬಂದಿದೆ. ತಾಪಂ ಇಒ ಡಾ| ಮಹೇಶ ಕುರಿಯವರನ್ನು ಮಾತನಾಡಿಸಿದಾಗ, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಪಿಡಿಒ ಹಾಗೂ ಟಿಎಇ ಅವರಿಗೆ ಈ ವಿಷಯ ಕುರಿತು ಉತ್ತರ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಹೇಳಿದರು. ಪಿಆರ್‌ಇಡಿ ಸಹಾಯಕ ಅಧಿಕಾರಿ ಎಸ್‌.ಆರ್‌. ವೀರಕರ ಅವರನ್ನು ಮಾತನಾಡಿಸಿದಾಗ, ಈ ವಿಷಯ ಕುರಿತು ಯಾವುದೇ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಹಾರಿಕೆ ಉತ್ತರ ನೀಡಿದರು. ಗ್ರಾಪಂ ಅಧ್ಯಕ್ಷ ಚಿದಾನಂದ ಕುಸುಗಲ್‌ ಪ್ರತಿಕ್ರಿಯಿಸಿ, ಪಿಡಿಓ ಹಾಗೂ ಎನ್‌ಆರ್‌ಜಿ ತಾಂತ್ರಿಕ ಸಹಾಯಕ ಅಧಿಕಾರಿಗಳು ನನ್ನ ಗಮನಕ್ಕೆ ತರದೆ ಈ ರೀತಿ ಖರ್ಚು ಹಾಕಿದ್ದಾರೆ ಎಂದು ಹೇಳಿದರು.

ಸರ್ಕಾರ ಅಂತರ್ಜಲ ಮಟ್ಟ ವೃದ್ಧಿಸಲು ಅಮೃತ ಯೋಜನೆಯಡಿ ಕೆರೆಗಳ ಅಭಿವೃದ್ಧಿªಗೆ ಸಾವಿರಾರು ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದು ಎಷ್ಟರಮಟ್ಟಿಗೆ ಸದುಪಯೋಗವಾಗುತ್ತಿದೆ, ಸದ್ಬಳಕೆಯಾಗುತ್ತಿದೆ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಸೂಕ್ತ ಮೇಲುಸ್ತುವಾರಿಯಾಗಬೇಕಿದೆ.

ಶೀತಲ ಎಸ್.ಎಂ

ಟಾಪ್ ನ್ಯೂಸ್

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.