ಹುಬ್ಬಳ್ಳಿಯಲ್ಲಿ ಪೊಲೀಸರ ಹತ್ಯೆಗೆ ನಡೆದಿತ್ತು ಸಂಚು!
ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೇದೆಗಳ ಹತ್ಯೆಗೆ ಮುಂದಾಗಿದ್ದ ಕಿಡಿಗೇಡಿಗಳು
Team Udayavani, Apr 21, 2022, 12:45 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ವೇಳೆ ಕಿಡಿಗೇಡಿಗಳು ಪೊಲೀಸರನ್ನೇ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಸತ್ಯ ಹೊರ ಬಿದ್ದಿದೆ.
ಅಂದು ಗಲಭೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ತೆರಳುತ್ತಿದ್ದ ಇಬ್ಬರು ಕಾನ್ಸ್ಟೇಬಲ್ ಗಳಿಗೆ ನೂರಾರು ಜನರಿದ್ದ ಕಿಡಿಗೇಡಿಗಳ ಗುಂಪು ಅಡ್ಡಗಟ್ಟಿ ನಿಲ್ಲಿಸಿದ್ದಲ್ಲದೆ, ಅವರ ಕೊಲೆಗೆ ಯತ್ನಿಸಿದ್ದಾರೆ. ಆಗ ಸ್ವಲ್ಪದರಲ್ಲಿಯೇ ಇವರಿಬ್ಬರು ಬಚಾವ್ ಆಗಿ ತಮ್ಮ ಜೀವ ರಕ್ಷಿಸಿಕೊಂಡಿದ್ದಾರೆ.
ಕಸಬಾಪೇಟೆ ಠಾಣೆ ಕಾನ್ಸ್ಟೇಬಲ್ ಗಳಾದ ಮಂಜುನಾಥ ರಾಯ ರಡ್ಡಿ ಮತ್ತು ಅನಿಲ ಕಾಂಡೇಕರ ಗಲಭೆಕೋರರಿಂದ ಬಚಾವ್ ಆಗಿದ್ದಾರೆ. ಇವರು ಅಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಿಡಿಗೇಡಿಗಳ ಗುಂಪು ದಿಡ್ಡಿ ಹನುಮಂತ ದೇವಸ್ಥಾನ ಬಳಿ ತಡೆದು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ವಿವಾದಾತ್ಮಕ ಪೋಸ್ಟ್ ಮಾಡಿದವನನ್ನು ಬಂಧಿಸದಿದ್ದರೆ ನಿಮಗೆ ಹಾಗೂ ಪೊಲೀಸರನ್ನೆಲ್ಲ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ.
ಮುಂದೆ ಸಾಗುವಾಗ ಇವರನ್ನು ಬಿಡಬ್ಯಾಡರಿ, ಕೊಂದ ಬಿಡ್ರಿ ಎಂದು ಪ್ರಚೋದನೆ ನೀಡಿದಾಗ 5-6 ಜನರಿದ್ದ ಗುಂಪು ದೊಡ್ಡ ಅಳತೆಯ ಕಲ್ಲನ್ನು ಇವರ ಮೇಲೆ ಎಸೆದು ಹತ್ಯೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಬೈಕ್ ಅಲ್ಲಿಯೇ ಬಿಟ್ಟು, ಜೀವ ಉಳಿಸಿಕೊಂಡಿದ್ದಾರೆ.
ನಂತರ ಗಲಭೆಕೋರರು ಪೊಲೀಸರ ಬೈಕ್‌ಗೆ ಹಾನಿ ಪಡಿಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸ್ಟೇಟಸ್ ಹಾಕಿದ್ದ ಯುವಕನಿಗೆ ಪರೀಕ್ಷೆ ಬರೆಯಲು ಅವಕಾಶ: ವಾಟ್ಸ್‌ಆ್ಯಪ್‌ನಲ್ಲಿ ವಿವಾದಾತ್ಮಕ ಸ್ಟೇಟಸ್ ಹಾಕಿ ಬಂಧಿತನಾಗಿರುವ ಇಲ್ಲಿನ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ವಿವಾದಾತ್ಮಕ ಸ್ಟೇಟಸ್ ಹಾಕಿದ ಆರೋಪದಡಿ ಏ.16ರಂದು ಬಂಧಿತನಾಗಿದ್ದ. ಈತನಿಗೆ ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಕಾರಣ ಅದಕ್ಕೆ ಅನುವು ಮಾಡಿಕೊಡಿ. ಇಲ್ಲವೇ ಕೂಡಲೇ ಜಾಮೀನು ನೀಡಿ ಎಂದು ವಕೀಲ ಸಂಜೀವ ಬಡಸ್ಕರ ಅವರು 4ನೇ ಅಪರ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಕಾರಾಗೃಹ ಅಧಿಕಾರಿಗಳು ಆತನಿಗೆ ಪ್ರತ್ಯೇಕ ಸೆಲ್‌ನಲ್ಲಿಟ್ಟು ಅಭ್ಯಾಸ ಮಾಡಲು ಪುಸ್ತಕ, ಮತ್ತಿತರೆ ವ್ಯವಸ್ಥೆ ಮಾಡಬೇಕು. ಪೊಲೀಸರು ಬಂದೋಬಸ್ತ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಬೇಕು ಹಾಗೂ ಆತನನ್ನು ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಗೆ ಹಾಜರುಪಡಿಸದೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸೌಲಭ್ಯ ಕಲ್ಪಿಸಿ ಬಂದೋಬಸ್ತ್ ನಲ್ಲಿಯೇ ಪರೀಕ್ಷೆ ಬರೆಯಿಸಬೇಕು ಎಂದು ಪೊಲೀಸರಿಗೆ ಸೂಚಿಸಿದೆ.
ಮೌಲ್ವಿ ಅಲ್ಲ ಲಾರಿ ಚಾಲಕ: ಗಲಭೆಗೆ ಪ್ರಚೋದನೆ ನೀಡಿದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್ ನಗರ ನಿವಾಸಿ ಮೌಲ್ವಿ ಅಲ್ಲ, ಲಾರಿ ಚಾಲಕನಾಗಿದ್ದಾನೆ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಇತ್ತೀಚೆಗೆ ಮೌಲ್ವಿ ತರಹ ಬಟ್ಟೆ ಹಾಕಿಕೊಂಡು ಓಡಾಡುತಿದ್ದ. ಅಲ್ಲದೇ ತನ್ನದೇ ಆದ ಬೆಂಬಲಿಗರ ಗುಂಪು ಕಟ್ಟಿಕೊಂಡಿದ್ದ ಎಂದು ತಿಳಿದು ಬಂದಿದೆ.
ಹೈದರಾಬಾದ್‌ಗೆ ತೆರಳಿದ ತಂಡ: ಶನಿವಾರ ರಾತ್ರಿ ಗಲಭೆಗೆ ಪ್ರಚೋದನೆ ನೀಡಿದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ತಲೆಮರೆಸಿಕೊಂಡು ಹೈದರಾಬಾದ್‌ನಲ್ಲಿ ಇದ್ದಾನೆಂಬ ಮಾಹಿತಿ ಮೇರೆಗೆ ತನಿಖಾ ತಂಡದ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯೊಂದಿಗೆ ಆತನ ಪತ್ತೆಗಾಗಿ ಹೈದರಾಬಾದ್‌ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೆ 12 ಮಂದಿ ವಶಕ್ಕೆ: ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 12 ಜನ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆಗೆ ಸಂಬಂ ಧಿಸಿ ಪೊಲೀಸರು ಇದುವರೆಗೆ ಒಟ್ಟು 115 ಜನರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅವರಲ್ಲಿ 103 ಜನರನ್ನು ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. ಇನ್ನುಳಿದವರನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.