ಊಹಾಪೋಹಕ್ಕೆ ಎಡೆಯಾದ ಹೆಬ್ಬೆರಳು!
Team Udayavani, Nov 7, 2022, 2:43 PM IST
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ತುರ್ತು ನಿಗಾ ಘಟಕ ಬಳಿಯ ಹೊರ ಪೊಲೀಸ್ ಠಾಣೆ ಹತ್ತಿರ ರವಿವಾರ ತುಂಡರಿಸಿದ್ದ ಹೆಬ್ಬೆರಳು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಆ ಬೆರಳು ಯಾರದೆಂಬುದು ಗೊತ್ತಾದ ಮೇಲೆ ಗೊಂದಲಕ್ಕೆ ತೆರೆಬಿದ್ದಿತು.
ತಡಸ ಗ್ರಾಮದ ಸಿದ್ದಪ್ಪ ಎಂಬುವರು ಸೊಪ್ಪು ಕತ್ತರಿಸುವಾಗ ಆಕಸ್ಮಾತ್ ಅವರ ಹೆಬ್ಬೆರಳು ತುಂಡರಿಸಿತ್ತು. ಅದನ್ನು ವೈದ್ಯರು ಜೋಡಿಸಬಹುದೆಂದು ನೀರಿನ ಡಬ್ಬದಲ್ಲಿ ಹಾಕಿಕೊಂಡು ಶನಿವಾರ ರಾತ್ರಿ ಕಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ.
ಆದರೆ ವೈದ್ಯರು ಅದರ ಮರುಜೋಡಣೆ ಅಸಾಧ್ಯ. ಅದನ್ನು ಕಸದಬುಟ್ಟಿಗೆ ಹಾಕಿ ಎಂದು ತಿಳಿಸಿದ್ದಾರೆ. ಆದರೆ ಸಿದ್ದಪ್ಪ ಅವರು ಅದನ್ನು ಕಿಮ್ಸ್ ತುರ್ತು ನಿಗಾಘಟಕ ಬಳಿಯ ಹೊರ ಪೊಲೀಸ್ ಠಾಣೆ ಹತ್ತಿರ ಬಿಸಾಡಿದ್ದಾರೆ. ರವಿವಾರ ಬೆಳಗ್ಗೆ ಅದನ್ನು ಜನರು ನೋಡಿದಾಗ ಗೊಂದಲವುಂಟಾಗಿ ಹಲವು ಊಹಾಪೋಹಗಳಿಗೆ ಎಡೆಮಾಡಿದೆ. ಅಲ್ಲದೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು.
ವಿಷಯ ತಿಳಿದು ವಿದ್ಯಾನಗರ ಠಾಣೆ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ವೈದ್ಯರಿಂದ ಮಾಹಿತಿ ಕಲೆ ಹಾಕಿ, ಆ ಬೆರಳು ಯಾರದು ಎಂಬುದನ್ನು ಪತ್ತೆ ಮಾಡಿದ ಬಳಿಕ ಕಿಮ್ಸ್ ಆವರಣದಲ್ಲಿ ಹಬ್ಬಿದ್ದ ಊಹಾಪೋಹಕ್ಕೆ ತೆರೆಬಿತ್ತು. ಸಿದ್ದಪ್ಪ ಅವರಿಗೆ ತಡಸ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ಮಾಡಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.