24ರಂದು ತ್ರಿವಿಕ್ರಮ ಚಿತ್ರ ಬಿಡುಗಡೆ: ಸಹನಮೂರ್ತಿ

10 ಕೋಟಿ ರೂ. ಬಜೆಟ್‌-ಎರಡು ವರ್ಷದ ಶ್ರಮ ; 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ

Team Udayavani, Jun 15, 2022, 6:01 PM IST

22

ಹುಬ್ಬಳ್ಳಿ: ತ್ರಿವಿಕ್ರಮ ಸಿನಿಮಾ ಎರಡು ವರ್ಷದ ಶ್ರಮವಾಗಿದ್ದು, ಜೂ. 24ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಸಹನಮೂರ್ತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಡುಗಡೆ ಮಾಡಿರುವ ಹಾಡುಗಳು ಜನರಿಗೆ ಸಾಕಷ್ಟು ಇಷ್ಟವಾಗಿದ್ದು, ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಉತ್ತರ ಕರ್ನಾಟಕದಿಂದಲೇ ಚಿತ್ರದ ಪ್ರಚಾರ ನಡೆಸಬೇಕು ಎನ್ನುವ ಕಾರಣಕ್ಕೆ ಇಲ್ಲಿಗೆ ಬಂದಿದ್ದು, ಜನರು ಒಳ್ಳೆಯ ಪ್ರೀತಿ ನೀಡಿದ್ದಾರೆ. 10 ಕೋಟಿ ರೂ. ಬಜೆಟ್‌ ಸಿನಿಮಾ ಇದ್ದಾಗಿದ್ದು, ಜನರ ಪ್ರೀತಿ ಗಳಿಸಲಿದೆ. ಸಾಧು ಕೋಕಿಲ, ಚಿಕ್ಕಣ್ಣ, ಆದಿ ಸೇರಿದಂತೆ ಅನುಭವಿ ತಾರಾ ಬಳಗವಿದೆ. ಕೊಡಚಾದ್ರಿ, ರಾಜಸ್ಥಾನ, ಕಾಶ್ಮೀರ ಸೇರಿದಂತೆ ಹಲವು ಸ್ಥಗಳಲ್ಲಿ ಚಿತ್ರೀಕರಣವಾಗಿದೆ. ಬ್ಯಾಂಕಾಂಕ್‌ ನಲ್ಲಿ ಹುಲಿಯೊಂದಿಗೆ ನೈಜವಾಗಿ ನಾಯಕನ ಫೈಟ್‌ ದೃಶ್ಯವನ್ನು ಚಿತ್ರೀಕರಿಸಲಾಗಿದೆ ಎಂದರು.

ಚಿತ್ರದಲ್ಲಿ ಆರು ಹಾಡುಗಳು ಇವೆ. ಲೋಕಲ್‌ ಹುಡುಗನೊಬ್ಬ ಜೈನ ಸಮುದಾಯಕ್ಕೆ ಸೇರಿದ ಶ್ರೀಮಂತರ ಹುಡುಗಿಯನ್ನು ಪ್ರೀತಿ ಮಾಡುವ ಕಥೆ, ತೊಳಲಾಟದ ವಿಭಿನ್ನ ಕಥೆಯ ಹಂದರವಾಗಿದೆ. ಸಮಾಜದಲ್ಲಿ ನಡೆಯುವ ಸನ್ನಿವೇಶದ ಅಂಶಗಳನ್ನು ಆಧರಿಸಿ ಕಥೆಯಿದೆ. ಯಾವುದೇ ಧರ್ಮಕ್ಕೆ ಅವಹೇಳನವಾಗದಂತೆ ಅವರ ಸಂಸ್ಕೃತಿ ಸಂಪ್ರದಾಯಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಕಥೆ ನಿರ್ಮಿಸಲಾಗಿದೆ. ಚಿತ್ರದ ಹೆಸರಲ್ಲಿಯೇ ದೊಡ್ಡ ಅರ್ಥವಿದೆ. ಈಗಾಗಲೇ 200 ಚಿತ್ರಮಂದಿರಗಳನ್ನು ಗುರುತಿಸಿದ್ದು, ಇನ್ನೂ 50 ಟಾಕೀಸ್‌ಗಳ ನಿರೀಕ್ಷೆಯಿದೆ ಎಂದು ಹೇಳಿದರು.

ಚಿತ್ರದ ನಾಯಕ ವಿಕ್ರಮ ರವಿಚಂದ್ರನ್‌ ಮಾತನಾಡಿ, ಮೊದಲ ಚಿತ್ರದಲ್ಲಿ ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡು ಶಕ್ತಿ ಮೀರಿ ತೊಡಗಿಸಿಕೊಂಡಿದ್ದೇನೆ. ಇದೊಂದು ಒಳ್ಳೆಯ ಚಿತ್ರವಾಗಿದ್ದು, ಕೇವಲ ಪ್ರೀತಿಯನ್ನು ತೋರಿಸುವುದಕ್ಕಾಗಿಯೇ ಮಾಡಿರುವ ಚಿತ್ರವಲ್ಲ. ಹುಲಿಯೊಂದಿಗೆ ಚಿಂಕೆಯ ಪ್ರೀತಿ ಆಗುತ್ತದೆಯೇ ಎನ್ನುವ ಚಿತ್ರದ ಒಳಸುಳಿ ಜನರಿಗೆ ಇಷ್ಟವಾಗುತ್ತದೆ. ಈ ಮೊದಲ ಚಿತ್ರದಿಂದ ಸಾಕಷ್ಟು ಕಲಿತಿದ್ದೇನೆ. ತಂದೆ ರವಿಚಂದ್ರನ್‌ ಅವರಿಗೆ ನಾಡಿನ ಜನರು ಸಾಕಷ್ಟು ಪ್ರೀತಿ ನೀಡಿದ್ದಾರೆ. ನನಗೆ ಒಂದು ಅವಕಾಶ ನೀಡುತ್ತಾರೆ ಎನ್ನುವ ಬಲವಾದ ಭರವಸೆಯಿದೆ ಎಂದರು.

ಇನ್ನೂ ಯಾವ ಸಿನಿಮಾಗೆ ಆಫರ್‌ಗಳು ಬಂದಿಲ್ಲ. ಬಹುಮುಖ ವ್ಯಕ್ತಿತ್ವ ಇಟ್ಟುಕೊಂಡು ನಟ, ನಿರ್ದೇಶಕ, ನಿರ್ಮಾಪಕನಾಗಿ ಬರಬೇಕು ಎನ್ನುವ ಆಸೆಯಿದೆ. ಸಿನಿಮಾ ಕ್ಷೇತ್ರದಲ್ಲಿ ಹುಟ್ಟಿದ್ದೇವೆ, ಇದರೊಂದಿಗೆ ಮುಂದೆ ಹೋಗುತ್ತೇವೆ. ಈ ಬದುಕು ಬಿಟ್ಟು ಬೇರೆಡೆಗೆ ಹೋಗುವ ಮಾತಿಲ್ಲ ಎಂದು ಹೇಳಿದರು.

ನಟಿ ಆಕಾಂಕ್ಷಾ ಶರ್ಮಾ ಮಾತನಾಡಿ, ಹಿಂದೆ ಆಲ್ಬಂ ಸಾಂಗ್‌, ಜಾಹೀರಾತಿನಲ್ಲಿ ನಟಿಸಿದ ಅನುಭವ ಇತ್ತು. ನನ್ನ ಮೇಲೆ ದೊಡ್ಡ ಭರವಸೆ ಇಟ್ಟುಕೊಂಡು ಅವಕಾಶ ನೀಡಿದ್ದಾರೆ. ಸಿನಿಮಾ ಮಂದಿರಕ್ಕೆ ಹೋಗಿ ವೀಕ್ಷಿಸಿ ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಬೇಕು ಎಂದರು.

ಧಾರವಾಡದ ಸಾಂಸ್ಕೃತಿಕ ಲೋಕ ಆರ್ಟ್ಸ್ ಆ್ಯಂಡ್‌ ಕಲ್ಚರ್‌ ಅಕಾಡೆಮಿಯ ವಿದ್ಯಾರ್ಥಿಗಳೊಂದಿಗೆ ನಟ ವಿಕ್ರಮ ಹಾಗೂ ನಟಿ ಆಕಾಂಕ್ಷಾ ಶರ್ಮಾ ಅವರು ತ್ರಿವಿಕ್ರಮ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದರು. ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.