ಭಾರ್ಗವ ಬಳಗದಿಂದ ವಿಶ್ವ ಕುಂದಾಪ್ರ ದಿನಾಚರಣೆ
ನಮ್ಮ ಆಚಾರ ವಿಚಾರಗಳನ್ನು ಎಲ್ಲಿಗೆ ಹೋದರೂ ಬಿಡಬಾರದು.
Team Udayavani, Aug 2, 2022, 6:12 PM IST
ಧಾರವಾಡ: ಇಲ್ಲಿನ ಭಾರ್ಗವ ಬಳಗದ ವತಿಯಿಂದ ವಿಶ್ವ ಕುಂದಾಪ್ರ ದಿನ ಆಚರಿಸಲಾಯಿತು. ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀರೇಶ ಅಂಚಟಗೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂದಾಪುರ ಕನ್ನಡ ಬಳಗವು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಕುಂದಾಪುರ ಗೆಳೆಯರು ಮಾತನಾಡುವ ಭಾಷೆ ನಮಗೆ ಅತ್ಯಂತ ಹರ್ಷ ತರುತ್ತದೆ ಎಂದರು.
ಹು-ಧಾ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿ, ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಊರಿನ ಹಬ್ಬಗಳಲ್ಲಿ ಭಾಗವಹಿಸುವಿಕೆಯನ್ನು ಕಲಿಸಲು ಮರೆಯಬಾರದು. ಮನೆಯಲ್ಲಿ ಕುಂದಾಪ್ರ ಭಾಷೆಯನ್ನು ಮಾತನಾಡಬೇಕು. ಇಂತಹ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ
ಮಾಡಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಎತ್ತಿ ಹಿಡಿಯೋಣ ಎಂದು ಸಲಹೆ ನೀಡಿದರು.
ಉದ್ಯಮಿ ಮಹೇಶ ಶೆಟ್ಟಿ ಮಾತನಾಡಿ, ಕುಂದಾಪ್ರ ಭಾಷೆ ಅಳಿವಿನ ಅಂಚಿನಲ್ಲಿದ್ದು, ಮನೆಯಲ್ಲಿ ಎಲ್ಲರೂ ಕುಂದಾಪ್ರ ಭಾಷೆಯನ್ನೇ ಮಾತನಾಡಬೇಕು. ಇಲ್ಲವಾದರೆ ಈ ಭಾಷೆ ಉಳಿಸುವುದು ಕಷ್ಟವಾಗುತ್ತದೆ. ನಮ್ಮ ಆಚಾರ ವಿಚಾರಗಳನ್ನು ಎಲ್ಲಿಗೆ ಹೋದರೂ ಬಿಡಬಾರದು. ರಜೆಯಲ್ಲಿ ಮಕ್ಕಳಿಗೆ ಟ್ಯೂಷನ್ ಬದಲು ಊರಿಗೆ ಕರೆದುಕೊಂಡು ಹೋಗಿ ಹಬ್ಬ ಆಚರಿಸಲು ಅನುವು ಮಾಡಿಕೊಡಬೇಕು ಎಂದು ಸಲಹೆ ನೀಡಿದರು. ಓಂಗಣೇಶ ಅವರು ಕುಂದಾಪ್ರ
ಭಾಷೆ ಸೊಗಡು ಕುರಿತು ಮಾತನಾಡಿದರು.
ಅವರ ನಗೆ ನಾಟಕಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು. ಸೀತಾರಾಮ ಶೆಟ್ಟಿ, ಸಂತೋಷ ಶೆಟ್ಟಿ, ವಿಜಯಾನಂದ ಶೆಟ್ಟಿ, ಸುರೇಶ ಶೆಟ್ಟಿ, ಹೋಟೆಲ್ ಉದ್ಯಮಿಗಳಾದ ಚಂದ್ರಶೇಖರ ಪುರಾಣಿಕ್, ಜಯರಾಮ್ ಪೂಜಾರಿ, ಹರೀಶ ಸುಧಾಕರ ಶೆಟ್ಟಿ, ಭಾರ್ಗವ ಬಳಗದ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.