207 ರೈತರಿಗೆ 1.43 ಕೋಟಿ ರೂ. ಸಾಲ ವಿತರಣೆ
Team Udayavani, Nov 8, 2021, 11:27 AM IST
ಚಿಂಚೋಳಿ: ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್ ರಾಜ್ಯದಲ್ಲಿಯೇ ಅತ್ಯಂತ ಹೀನಾಯ ಸ್ಥಿತಿಯಲ್ಲಿರುವುದರಿಂದ ಮುಚ್ಚುವ ಹಂತಕ್ಕೆ ಬಂದಿತ್ತು. ಆದರೆ ಬಿಜೆಪಿ ಸರ್ಕಾರ ಅದನ್ನು ಪುನಶ್ಚೇತನಗೊಳಿಸಲು ಕಾಂಗ್ರೆಸ್ ಪಕ್ಷದ ನಿರ್ದೇಶಕರ ಸಹಕಾರದಿಂದ ಡಿಸಿಸಿ ಬ್ಯಾಂಕ್‌ನಲ್ಲಿ ಆಡಳಿತ ಚುಕ್ಕಾಣಿ ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಶಾಸಕ ಡಾ| ಅವಿನಾಶ ಜಾಧವ ಹೇಳಿದರು.
ತಾಲೂಕಿನ ಚೆನ್ನೂರ ಪುರ್ನವಸತಿ ಕೇಂದ್ರದಲ್ಲಿ ಗಡಿಲಿಂಗದಳ್ಳಿ (ಚೆನ್ನೂರ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 2021-22ನೇ ಸಾಲಿಗಾಗಿ ಸಹಕಾರ ಸಂಘಗಳ 207 ಹೊಸ ರೈತರಿಗೆ ಒಟ್ಟು 1.43 ಕೋಟಿ ರೂ. ಶೂನ್ಯ ಬಡ್ಡಿರಹಿತ ಸಾಲದ ಚೆಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ಮಹಾಮಾರಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಸಿಸಿ ಬ್ಯಾಂಕ್ ಪುನಶ್ಚೇತನಗೊಳಿಸಿ ರೈತರಿಗೆ ಸಾಲ ನೀಡುವ ಭರವಸೆ ನೀಡಿದ್ದರು. ಅದರಂತೆ ಜಿಲ್ಲೆಯ ಎಲ್ಲ ಶಾಸಕರು ಜೊತೆಗೂಡಿ ಕಾಂಗ್ರೆಸ್ ಪಕ್ಷದ ಡಿಸಿಸಿ ಬ್ಯಾಂಕ್ ನಿರ್ದೇಶಕ ಗೌತಮ ಪಾಟೀಲರ ಸಹಕಾರ, ಬೆಂಬಲ ಪಡೆದುಕೊಂಡು ಅಧಿಕಾರ ಪಡೆದುಕೊಂಡಿದ್ದೇವೆ. ಐನಾಪುರ ವಲಯದ ಹಿಂದುಳಿದ ಪ್ರದೇಶದಲ್ಲಿ ಹೈನುಗಾರಿಕೆ, ಹನಿ ನೀರಾವರಿ, ಪೈಪ್ ಲೈನ್, ಕೃಷಿ ಚಟುವಟಿಕೆಗೋಸ್ಕರ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಶೂನ್ಯಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಗೌತಮ ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಸಹಕಾರಿ ಪತ್ತಿನ ಬ್ಯಾಂಕ್‌ಗಳಿಂದ ಇದುವರೆಗೆ ಒಟ್ಟು 17ಕೋಟಿ ರೂ. ರೈತರಿಗೆ ಸಾಲ ನೀಡಲಾಗಿದೆ. ಡಿಸಿಸಿ ಬ್ಯಾಂಕ್‌ನಿಂದ ಒಟ್ಟು ಒಂದು ಸಾವಿರ ಕೋಟಿ ರೂ. ಪ್ರಸಕ್ತ ಸಾಲಿನಲ್ಲಿ ನೀಡಲಾಗುತ್ತಿದೆ. ಚೆನ್ನೂರ ಸಹಕಾರಿ ಸಂಘಕ್ಕೆ ಒಟ್ಟು 1.43 ಕೋಟಿ ರೂ.ನೀಡಲಾಗುತ್ತಿದ್ದು, ಇದು ಶಾಸಕರ ಸಹಕಾರದಿಂದ ಸಾಧ್ಯವಾಗಿದೆ ಎಂದರು.
ಇದನ್ನೂ ಓದಿ: ನಾಗಮ್ಮ ತಾಯಿ ಜಾತ್ರೆ-ಸರಳ ಸಾಮೂಹಿಕ ವಿವಾಹ
ರೈತರು ಸಾಲ ಮರು ಪಾವತಿಸದೇ ಸಾಲದ ಹೊರೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಶೂನ್ಯ ದರದಲ್ಲಿ ಸಾಲ ನೀಡಲಾಗುತ್ತಿದೆ. ಪಟ್ಟಣದ ಹೊರವಲಯದಲ್ಲಿನ ಚಿಂಚೋಳಿ ಸಕ್ಕರೆ ಕಾರ್ಖಾನೆ ಮೇಲೆ 210 ಕೋಟಿ ರೂ. ಸಾಲ ಎತ್ತಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ಜಾರಿಯಲ್ಲಿದೆ. ಆದರೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಕ್ಕರೆ ಕಾರ್ಖಾನೆ ಖರೀದಿಸಿ ನ.22ರಂದು ಭೂಮಿಪೂಜೆ ನಡೆಸುತ್ತಿದ್ದಾರೆ. ಇದು ಈ ಭಾಗದ ರೈತರಿಗೆ ಖುಷಿ ತಂದಿದೆ ಎಂದರು.
ಚೆನ್ನೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ರೇವಣಸಿದ್ಧಪ್ಪ ಕೋಡ್ಲಿ ಮಾತನಾಡಿ, ನಮ್ಮ ಸಂಘದ ರೈತರಿಗೆ ಒಟ್ಟು 1.43ಕೋಟಿ ರೂ.ಸಾಲ ಮಂಜೂರಿಯಾಗಿದೆ. 123 ಹಳೆ ರೈತರಿಗೆ ಒಟ್ಟು ಒಂದು ಕೋಟಿ ರೂ. ಸಾಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರ 1.17ಕೋಟಿ ರೂ.ಸಾಲ ಮನ್ನಾ ಆಗಿದೆ. ಇನ್ನು 12 ಲಕ್ಷ ರೂ. ಸಾಲ ಬಾಕಿ ಇದೆ ಎಂದರು.
ಬಿಜೆಪಿ ಮುಖಂಡ ಅಲ್ಲಮಪ್ರಭು ಹುಲಿ, ನಿರ್ದೇಶಕ ಶೈಲೇಶ ಹುಲಿ, ಉಪಾಧ್ಯಕ್ಷೆ ಶಕುಂತಲಾ ಹುಲಿ, ಗಡಿಲಿಂಗದಳ್ಳಿ ಗ್ರಾಪಂ ಅಧ್ಯಕ್ಷ ಗೌರಿಶಂಕರ ಉಪ್ಪಿನ, ಪ್ರೇಮಸಿಂಗ್ ಜಾಧವ, ದಿವಾಕರ ಜಾಹಾಗೀರದಾರ, ಸತೀಶರೆಡ್ಡಿ ತಾಜಲಾಪುರ, ಪಿಎಸ್‌ಐ ಹಣಮಂತ ಬಿ. ಭವಾನಿ ಚಂದನಕೇರಾ, ನರಸಿಂಗ ಜಾಧವ, ಜಗನ್ನಾಥ ಜಾಧವ, ರವಿ ಕೊಟಗಾ ಇನ್ನಿತರರಿದ್ದರು. ಸಮಾರಂಭದಲ್ಲಿ ಒಟ್ಟು 11 ರೈತರಿಗೆ ಸಾಮೂಹಿಕವಾಗಿ ಸಾಲದ ಚೆಕ್ ವಿತರಿಸಲಾಯಿತು. ಅಲ್ಲಮಪ್ರಭು ಪಾಟೀಲ ಸ್ವಾಗತಿಸಿದರು. ಕಾರ್ಯದರ್ಶಿ ಶಿವಕುಮಾರ ಪಾಟೀಲ ನಿರೂಪಿಸಿದರು, ಸೂರ್ಯಕಾಂತ ಹುಲಿ ವಂದಿಸಿದರು.ಪಾಟೀಲ, ನಿರ್ದೇಶಕ ಶೈಲೇಶ ಹುಲಿ, ಶಕುಂತಲಾ ಹುಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.