ಒಂದು ಪುಸ್ತಕ ನೂರು ಸ್ನೇಹಿತರಿದ್ದಂತೆ: ಡಾ| ಗುಬ್ಬಿ
Team Udayavani, Dec 6, 2021, 12:29 PM IST
ಸೇಡಂ: ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ಕೆಲಸವಾಗಬೇಕು. ಒಂದು ಪುಸ್ತಕ ನೂರು ಸ್ನೇಹಿತರಿಗೆ ಸಮ ಎನ್ನುವುದನ್ನು ಯುವ ಸಮೂಹ ಅರಿಯಬೇಕು ವೈದ್ಯ, ಲೇಖಕ ಡಾ| ಎಸ್.ಎಸ್ ಗುಬ್ಬಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೃಪತುಂಗ ಅಧ್ಯಯನ ಸಂಸ್ಥೆ, ಮಹಾಭೋ ಪ್ರಕಾಶನ, ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಸಾಹಿತಿಗಳಾದ ಡಾ| ಬಸವರಾಜ ಕಲೆಗಾರ ರಚಿಸಿರುವ ಕಲಾಧ್ಯಾನ ಮತ್ತು ಅನಾವರಣ, ಡಾ| ಪದ್ಮಾವತಿ ಕಲೆಗಾರ ರಚಿಸಿರುವ ನೆಲ ಸಂಸ್ಕೃತಿಯ ಚಿಂತನೆ ಮತ್ತು ರೇಖಾಕ್ಷಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ದುಡ್ಡು ಸಂಪಾದಿಸುವವರನ್ನು ಶ್ರೀಮಂತರೆನ್ನಲು ಸಾಧ್ಯವಿಲ್ಲ. ವಿದ್ಯಾ ಸಂಪಾದನೆಯೇ ಬಹುದೊಡ್ಡ ಶ್ರೀಮಂತಿಕೆಯಾಗಿದೆ. ಜ್ಞಾನವುಳ್ಳವನಿಗೆ ಯಾವತ್ತೂ ಬಡತನ ಬರುವುದೇ ಇಲ್ಲ ಎಂದರು.
ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಮಾತನಾಡಿ, ಸಾಧನೆ ಹಾದಿಯಲ್ಲಿ ಸಾಗುವುದರಿಂದದ ಮನುಷ್ಯನ ಬದುಕು ಶ್ರೇಷ್ಠ ಎನಿಸಿಕೊಳ್ಳುತ್ತದೆ. ಐಎಎಸ್, ಐಪಿಎಸ್, ಸಾಹಿತಿ ಏನಾದರೂ ಆಗಲು ಸಾಧ್ಯವಾಗುತ್ತದೆ. ಜೀವನದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಮಾಣಿಕರಾವ್ ಕುಲಕರ್ಣಿ, ಮಹಾಬೋ ಪ್ರಕಾಶಕನದ ಪ್ರಕಾಶಕ ಡಾ| ಚಂದ್ರಶೇಖರ ದೊಡ್ಡಮನಿ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಸಾಹಿತಿ, ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಮಾತನಾಡಿದರು.
ಇತಿಹಾಸ ತಜ್ಞ ಡಾ| ಶ್ರೀಶೈಲ ಬಿರಾದಾರ, ರಾಯಚೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಅಧ್ಯಾಪಕ ಡಾ| ಶರಣಪ್ಪ ಚಲುವಾದಿ, ಎನ್.ಟಿ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಪ್ರೊ| ಶೋಭಾದೇವಿ ಚೆಕ್ಕಿ, ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ಬಿ.ಆರ್ ಅಣ್ಣಾಸಾಗರ, ಪುರಸಭೆ ಸದಸ್ಯ ರವೀಂದ್ರ ಜಡೇಕರ್ ವೇದಿಕೆಯಲ್ಲಿದ್ದರು. ವಿದ್ಯಾರ್ಥಿನಿ ಗೀತಾ ಪ್ರಾರ್ಥಿಸಿದರು, ಲೇಖಕಿ ಡಾ| ಪದ್ಮಾವತಿ ಕಲೆಗಾರ ಸ್ವಾಗತಿಸಿದರು, ಅಂಜನಾ ಜಡೇಕರ್ ನಿರೂಪಿಸಿದರು, ಸಾಹಿತಿ ಬಸವರಾಜ ಕಲೆಗಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.