ಕಲಬುರಗಿ ಕಲಾವಿದೆಯಿಂದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Nov 18, 2021, 11:32 AM IST
ದಾವಣಗೆರೆ: ಕಲಬುರುಗಿ ಚಿತ್ರ ಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನ.18ರಿಂದ 20ರ ವರೆಗೆ ದಾವಣಗೆರೆಯ ದೃಶ್ಯಕಲಾ ವಿದ್ಯಾಲಯ ಆವರಣದಲ್ಲಿರುವ ದೃಶ್ಯ ವಿಶ್ವ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ದೃಶ್ಯಕಲಾ ಮಹಾವಿದ್ಯಾಲಯ ಬೋಧಕ ದತ್ತಾತ್ರೇಯ ಭಟ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರುಗಿಯ ಕಾಲೇಜ್ ಆಫ್ ವಿಜ್ಯುಯಲ್ ಆಟ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಜಲಜಾಕ್ಷಿ ಪಿ. ಕುಲಕರ್ಣಿ ರಚಿಸಿರುವ ಪೇಟಿಂಗ್‌ಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಾವಣಗೆರೆಯಲ್ಲಿ ಮೊದಲ ಬಾರಿಗೆ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡುತ್ತಿದ್ದಾರೆ ಎಂದರು.
ಗುರುವಾರ ಬೆಳಗ್ಗೆ 10:30ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ದೃಶ್ಯಕಲಾ ಮಹಾವಿದ್ಯಾಲಯ ಸಂಯೋಜಕ ಡಾ| ಸತೀಶ್‌ಕುಮಾರ್ ಪಿ. ವಲ್ಲೆಪುರೆ ಭಾಗವಹಿಸುವರು. ಮೂರು ದಿನಗಳ ಕಾಲ ಬೆಳಗ್ಗೆ 10:30 ರಿಂದ ಸಂಜೆ 5ರ ವರೆಗೆ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಏಕವ್ಯಕ್ತಿ ಪ್ರದರ್ಶನದಲ್ಲಿ 25ಕ್ಕೂ ಹೆಚ್ಚು ಸಮಕಾಲೀನ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಸಮಕಾಲೀನ ನವ್ಯಶೈಲಿ, ರೇಖಾ ಚಿತ್ರ, ಮಿಕ್ಸೆಡ್ ಮೀಡಿಯಾ, ಪ್ರಕೃತಿಗೆ ಸಂಬಂಧಿಸಿದ ವಿವಿಧ ಕಲಾಕೃತಿಗಳನ್ನು ರಚಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದಾವಣಗೆರೆಯಲ್ಲಿ ತಮ್ಮ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಅವಕಾಶ ನೀಡಿರುವುದಕ್ಕೆ ಸಂತಸವಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.