![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2022, 1:28 PM IST
ಜೇವರ್ಗಿ: ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮೇಲೆ ಹಲ್ಲೆ, ಕೊಲೆ ಯತ್ನ ನಡೆಸಲಾಗಿದ್ದು, ಕೂಡಲೇ ಹಲ್ಲೆ ಮಾಡಲೆತ್ನಿಸಿದ್ದ ಆರೋಪಿಗಳನ್ನು ಬಂಧಿಸಬೇಕು. ಕೇಜ್ರಿವಾಲ್ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ತಾಲೂಕು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.
ದೇಶವೇ ಕಂಡು ಕೇಳರಿಯದ ಮಹತ್ತರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಜನಾನುರಾಗಿ ಸರ್ಕಾರವಾಗಿ ಆಪ್ ಹೊರಹೊಮ್ಮಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಂಜಾಬ್ ರಾಜ್ಯವನ್ನು ಆಮ್ ಆದ್ಮಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅಭಿವೃದ್ದಿ ಸಹಿಸದ ಪಟ್ಟಭದ್ರ ಹಿತಾಸಕ್ತಿ ಪಕ್ಷಗಳು ಕೇಜ್ರಿವಾಲ ಮೇಲೆ ಹಲ್ಲೆಗೆ ಪ್ರಯತ್ನಿಸಿವೆ. ಅಭಿವೃದ್ಧಿ ನೇತಾರ, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ ಅವರಿಗೆ ಸೂಕ್ತ ರಕ್ಷಣೆ ನೀಡದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಕಾರ್ಯಕರ್ತರು ಎಚ್ಚರಿಸಿದರು.
ಆಮ್ ಆದ್ಮಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಈರಣ್ಣಗೌಡ ಪಾಟೀಲ ಗೂಳ್ಳಾಳ, ಬಸವರಾಜ ಹರವಾಳ, ದೌಲತ್ರಾಯ ಕುಂಬಾರ, ಭಾಷಾಪಟೇಲ ಯಾಳವಾರ, ಅಬ್ದುಲ ಕರೀಮ ಕೂಡಿಕರ್, ಹೀಬ ಜಮಾದಾರ, ಪರಮಾನಂದ ಯಲಗೋಡ, ಶರಣು ನೇರಡಗಿ, ಅಬ್ದುಲಸಾಬ್ ಮಲ್ಲಾಬಾದಿ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.