ಮುತ್ತಗಾದಲ್ಲಿ ಗದ್ದೆಗೆ ಆಕಸ್ಮಿಕ ಬೆಂಕಿ-32 ಎಕರೆ ಕಬ್ಬು ಭಸ್ಮ


Team Udayavani, Mar 18, 2022, 3:01 PM IST

8fire

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ವಿವಿಧ ರೈತರಿಗೆ ಸೇರಿದ ಸುಮಾರು 32.33 ಎಕರೆ ಕಬ್ಬಿನ ಬೆಳೆಗೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಕಬ್ಬು ಸಂಪೂರ್ಣ ಭಸ್ಮವಾಗಿದೆ.

ಮುತ್ತಗಾ ಗ್ರಾಮದ ಮೈಲಾರಿ ಪ್ರಭು, ಚಂದ್ರಕಾಂತ ಮಲಕಪ್ಪ, ಗೌರಮ್ಮ ಪ್ರಭು, ಪ್ರಭು ಮೈಲಾರಿ, ಬಸವರಾಜ ಮಾಳಪ್ಪ, ತಿಪ್ಪಣ್ಣ ಬಸಲಿಂಗಪ್ಪ, ಶಕುಂತಲಾ ತಿಪ್ಪಣ್ಣ, ರಾಜಗೋಪಾಲ ರಾಮಚಂದ್ರ, ವಿರೇಶ ತಿಪ್ಪಣ್ಣ, ಸಾಬಣ್ಣ ದೊಡ್ಡಪ್ಪ ಅವರಿಗೆ ಸೇರಿದ ಸುಮಾರು 32.33 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಗೆ ಬೆಂಕಿ ತಗುಲಿದೆ.

ಇದನ್ನು ಕಂಡ ಅಕ್ಕ-ಪಕ್ಕದ ಜಮೀನಿನಲ್ಲಿದ್ದ ರೈತರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದರು. ಅಗ್ನಿಶಾಮಕ ವಾಹನ ಸ್ಥಳಕ್ಕೆ ಬರುವುದರೊಳಗೆ ಬೆಂಕಿ ಜಮೀನಿನ ಇತರೆ ಭಾಗಕ್ಕೆ ಹರಡದಂತೆ ತಡೆಯುವ ಉದ್ದೇಶದಿಂದ ಗ್ರಾಮಸ್ಥರು ನೀರು ಹಾಕಿ, ಗಿಡದ ತಪ್ಪಲಿನಿಂದ ನಂದಿಸಲು ಹರಸಾಹಸಪಟ್ಟಿದ್ದರು. ಆದರೆ ಗಾಳಿ ಹೆಚ್ಚಾಗಿದ್ದರಿಂದ ಬೆಂಕಿ ಜೋರಾಗಿ ಜಮೀನಿನ ಎಲ್ಲ ಬೆಳೆಗೆ ಹರಡಿತ್ತು. ಇದರಿಂದ ಒಂದು ಹೊಲದಿಂದ ಸುತ್ತಮುತ್ತಲಿನ ಕಬ್ಬಿನ ಗದ್ದೆಗೆ ಬೆಂಕಿ ವ್ಯಾಪಿಸಿ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಬೆಂಕಿಯ ಕೆನ್ನಾಲಿಗೆಯಿಂದ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ, ಚಿತ್ತಾಪುರದಿಂದ ಎರಡು ಅಗ್ನಿಶಾಮಕ ವಾಹನಗಳು, ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಕೈಗೊಂಡರು.

ಗ್ರೇಡ್‌-2 ತಹಶೀಲ್ದಾರ್‌ ಗುರುರಾಜ ಸಂಗಾವಿ, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ, ಚಿತ್ತಾಪುರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಂಜುಕುಮಾರ ಮಾನಕರ್‌, ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ ಗದ್ದೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಪಿಆರ್‌ ಸಕ್ಕರೆ ಕಾರ್ಖಾನೆಯವರು ಸಮಯಕ್ಕೆ ಸರಿಯಾಗಿ ಕಬ್ಬು ಕಟಾವು ಮಾಡಿದ್ದರೆ ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಬರುತ್ತಿರಲಿಲ್ಲ. ಲಕ್ಷಾಂತರ ರೂ. ಬೆಳೆ ಕಣ್ಣ ಮುಂದೆ ಬೆಂಕಿಗೆ ಆಹುತಿಯಾಗಿದನ್ನು ಕಂಡು ರೈತರು ಕಂಗಾಲಾಗಿದ್ದಾರೆ. ಅಧಿಕಾರಿಗಳಿಗೆ ಕರೆ ಮಾಡಿದರೇ ಯಾರೂ ಸ್ಪಂದಿಸುತ್ತಿಲ್ಲ. ಜಿಲ್ಲಾ ಧಿಕಾರಿಗಳು ಹಾಗೂ ಶಾಸಕರು ಕೂಡಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. -ಬಸವರಾಜ ಕೋರಿ, ರೈತ ಮುಖಂಡ

ಟಾಪ್ ನ್ಯೂಸ್

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.