ಸಮಾಜದ ಶಾಂತಿ ಕದಡಿದರೆ ಕ್ರಮ: ಎಎಸ್ಪಿ


Team Udayavani, Apr 10, 2022, 1:08 PM IST

9-action

ವಾಡಿ: ವೈಯಕ್ತಿಕ ದ್ವೇಷ ಸಮಾಜದ ಅಶಾಂತಿಗೆ ಕಾರಣವಾದರೆ, ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನಕುಮಾರ ದೇಸಾಯಿ ಎಚ್ಚರಿಕೆ ನೀಡಿದರು.

ಲಾಡ್ಲಾಪುರ ಗ್ರಾಮದಲ್ಲಿ ವಾಡಿ ಪೊಲೀಸ್‌ ಠಾಣೆ ವತಿಯಿಂದ ಏರ್ಪಡಿಸಲಾಗಿದ್ದ “ಮನೆ ಬಾಗಿಲಿಗೆ ಪೊಲೀಸ್‌’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಧರ್ಮಿಯ ಜನರು ಕೋಮು ಸೌಹಾರ್ದತೆಯಿಂದ ಬದುಕಿದರೆ ಊರೊಂದು ಶಾಂತಿ ತೋಟವಾಗುತ್ತದೆ. ಸಣ್ಣಪುಟ್ಟ ಗಲಾಟೆಗಳು ಗ್ರಾಮಸ್ಥರ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು. ಕ್ಷುಲ್ಲಕವಾದ ಜಗಳಗಳು ಹಿರಿಯರ ಸಂಧಾನದಲ್ಲೇ ಕೊನೆಗಾಣಬೇಕು. ಇದನ್ನು ಮೀರಿದರೆ ಠಾಣೆಗೆ ದೂರು ನೀಡುವ ಮೂಲಕ ಕಾನೂನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಭಾವೋದ್ವೇಗಕ್ಕೊಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಪ್ರತಿಯೊಂದು ಸಮಸ್ಯೆಗೂ ಕಾನೂನಿನಲ್ಲಿ ಪರಿಹಾರವಿದೆ. ಸಹೋದರತ್ವ ಭಾವದಿಂದ ಬಾಳುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.

ಊರಿನಲ್ಲಿ ಯಾರಾದರೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಕಂಡು ಬಂದರೆ ಅಥವಾ ಅಮಾಯಕರ ಮೇಲೆ ದೌರ್ಜನ್ಯ ಎಸಗುತ್ತಿದ್ದರೆ, ಸಾಮಾಜಿಕ ವಾತಾವರಣ ಹದಗೆಡಿಸುತ್ತಿದ್ದರೆ ತಕ್ಷಣ ಪೊಲೀಸ್‌ ಠಾಣೆಗೆ ದೂರು ಕೊಡಿ. ದೂರು ಕೊಟ್ಟವರ ಹೆಸರನ್ನು ನಾವು ಯಾವುದೇ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಪೊಲೀಸರು ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಸಮಾಜಘಾತುಕರನ್ನು ಜನರ ಮಧ್ಯೆ ಇರಲು ಬಿಟ್ಟರೆ ಆಪತ್ತು ತಂದಿಡುತ್ತಾರೆ. ಅಂಥಹವರಿಗೆ ಕಾನೂನು ಪಾಠ ಕಲಿಸುತ್ತದೆ ಎಂದು ಹೇಳಿದರು.

ಅಪಘಾತ, ಬಾಲ್ಯ ವಿವಾಹ, ವಾಹನ ಚಾಲಕರ ಮದ್ಯ ಸೇವನೆ, ಪುಂಡಾಟಿಕೆ, ಹಣಕಾಸು ವ್ಯವಹಾರ, ಮಟಕಾ, ಗಾಂಜಾ ಮಾರಾಟದಂತ ಕಾನೂನುಬಾಹೀರ ಚಟುವಟಿಕೆಗಳ ಕುರಿತು ತಿಳಿ ಹೇಳಿದರು.

ಸಿಪಿಐ ಚಂದ್ರಕಾಂತ ಯಾತನೂರ, ಪಿಎಸ್‌ಐ ಮಹಾಂತೇಶ ಜಿ.ಪಾಟೀಲ, ಗ್ರಾಪಂ ಅಧ್ಯಕ್ಷೆ ಸೋನಿಬಾಯಿ ರಾಠೊಡ, ಉಪಾಧ್ಯಕ್ಷ ಬಸವರಾಜಗೌಡ ಮಾಲಿಪಾಟೀಲ, ಮುಖಂಡರಾದ ನಾಗೇಂದ್ರಪ್ಪ ಮುಕ್ತೇದಾರ, ವೀರೇಶ ಕೊಂಚೂರು, ಗೋವಿಂದಪ್ಪ, ಸಾಬಣ್ಣ ಆನೇಮಿ, ವಿಶ್ವನಾಥ ಗಂದಿ, ಶ್ಯಾಮಸುಂದರ ರೆಡ್‌ಸನ್‌, ಗುಂಡುಗೌಡ ಪಾಟೀಲ, ಈರಣ್ಣ ಮಲಕಂಡಿ, ದೊಡ್ಡಪ್ಪಗೌಡ ಪೊಲೀಸ್‌ ಪಾಟೀಲ, ಸಾಬಣ್ಣ ಗೊಡಗ, ನಾಗಣ್ಣ ಹೂಗಾರ, ಚಂದಪ್ಪ ಲಕಬಾ, ತಳಜಾರಾಮ ರಾಠೊಡ, ಸುಬ್ಬಣ್ಣ ಭೋವಿ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಪಿಡಿಒ ಕಲ್ಯಾಣಿ ಕೊಳ್ಳದ್‌ ಸ್ವಾಗತಿಸಿದರು, ಶಾಂತಕುಮಾರ ಎಣ್ಣಿ ನಿರೂಪಿಸಿದರು, ಮಲ್ಲಮ್ಮ ಕುಂಬಾರ ವಂದಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.