![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 28, 2022, 1:10 PM IST
ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್‌ನ ಕೆಲಸ ಕಾರ್ಯಗಳಿಗಾಗಿ ಸರ್ಕಾರ ಮತ್ತು ಪರಿಷತ್ ನಡುವೆ ಸಂಪರ್ಕ ಸೇತುವೆ ರೀತಿಯಲ್ಲಿ ಕೆಲಸ ಮಾಡಲಾಗುವುದು ಮತ್ತು ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಷತ್‌ಗೆ ವಾಹನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ನಗರದ ಕನ್ನಡ ಭವನ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ ಹೆಚ್ಚಿನ ಜನರನ್ನು ಆಕರ್ಷಿಸುವಲ್ಲಿ ಮತ್ತು ಜ್ಞಾನರ್ಜನೆಗೆ ಗ್ರಂಥಾಲಯ ಸಹಕಾರವಾಗಲಿದೆ. ಪರಿಷತ್‌ಗೆ ಕೆಕೆಆರ್‌ಡಿಬಿ ಅನುದಾನ ಅಥವಾ ಸರ್ಕಾರದಿಂದ ವಾಹನ ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಜತೆಗೆ ದರ್ಶನಾಪುರ ರಂಗಮಂದಿರಕ್ಕೆ ಧ್ವನಿ ವರ್ಧಕದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಈಗಾಗಲೇ ಪರಿಷತ್ ಚಟುವಟಿಕೆಗಳು ಮತ್ತು ಕನ್ನಡ ಭವನ ಆವರಣದಲ್ಲಿ ಅಭಿವೃದ್ಧಿಗೆ ಕೆಲಸಗಳಿಗೆ ಸಹಕಾರ ನೀಡಲಾಗುತ್ತಿದೆ. ಮುಂದೆಯೂ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಗ್ರಾಮೀಣ ಪ್ರದೇಶದಲ್ಲಿ ಪರಿಷತ್ ಚಟುವಟಿಕೆ ಕೈಗೊಳ್ಳಲು ಮತ್ತು ವಿಸ್ತರಿಸಿಲು ವಾಹನದ ಅವಶ್ಯಕತೆಯಿದೆ. ದರ್ಶನಾಪುರ ರಂಗಮಂದಿರದಲ್ಲಿ ಶಾಶ್ವತವಾದ ಧ್ವನಿ ವರ್ಧಕ ಅಳವಡಿಸಬೇಕಿದೆ ಎಂದು ಕೋರಿದರು.
ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಬಿ.ಜಿ.ಪಾಟೀಲ, ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಡಾ| ಶರಣರಾಜ ಛಪ್ಪರಬಂದಿ, ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಜಯಕುಮಾರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.