ಪೊಲೀಸ್ ದೌರ್ಜನ್ಯ ಆರೋಪ; ಪ್ರತಿಭಟನೆ
Team Udayavani, Dec 27, 2021, 1:13 PM IST
ಚಿಂಚೋಳಿ: ತಾಲೂಕಿಗೆ ಶವ ಸಂಸ್ಕಾರಕ್ಕೆ ಹೊರಟಿದ್ದ ಜೀಪು ನಿಲ್ಲಿಸಿ ದಂಡ ವಿಧಿಸಿದ ಸುಲೇಪೇಟ ಪೊಲೀಸರಿಗೆ ಹಣ ನೀಡಿ ರಸೀದಿ ಪಡೆದು ಬರುವಾಗ ಕಾನ್‌ಸ್ಟೇಬಲ್‌ವೊಬ್ಬರು ಜೀಪು ಚಾಲಕನಿಗೆ ಲಾಠಿಯಿಂದ ಥಳಿಸಿರುವುದನ್ನು ಖಂಡಿಸಿ ಪಸ್ತಪುರ ಗ್ರಾಮಸ್ಥರು ದಸ್ತಾಪುರ ಗ್ರಾಮದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ತಾಲೂಕಿನ ಪಸ್ತಪುರ ಗ್ರಾಮಸ್ಥರು ಪಟ್ಟಣದಲ್ಲಿ ಶವ ಸಂಸ್ಕಾರದಲ್ಲಿ ಭಾಗವಹಿಸಲು ಜೀಪಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ದಸ್ತಾಪುರ ಗ್ರಾಮದ ಹತ್ತಿರ ಪೊಲೀಸರು ಜೀಪು ನಿಲ್ಲಿಸಿ ದಂಡ ವಸೂಲಿ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಚಾಲಕನ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಆಗ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ಲಾಠಿಯಿಂದ ಥಳಿಸಿದ್ದಾರೆ ಎಂದು ದೂರಿದ ಗ್ರಾಮಸ್ಥರು ಚಿಂಚೋಳಿ ಕಲಬುರಗಿ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ನಡೆಸಿ, ಎರಡು ತಾಸು ವಾಹನ ಸಂಚಾರ ಸ್ಥಗಿತಗೊಳಿಸಿದ್ದರು.
ಸಿಪಿಐ ಜಗದೀಶ ಜಿ.ಕೆ, ಪಿಎಸ್‌ಐ ಸುಖಾನಂದಸಿಂಗ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಪೊಲೀಸ್ ಕಾನ್ ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ, ಬಸವರಾಜ ಬಾಲಿ, ಜಗನ್ನಾಥ ಧುತ್ತರಗಿ, ಸನ್ನಿ ಜಾಬಶೆಟ್ಟಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.