ಅಂಗನವಾಡಿಗಳ ಅಭಿವೃದ್ದಿಗೆ ಶ್ರಮ: ಮೀನಾಕ್ಷಮ್ಮ
Team Udayavani, Nov 25, 2021, 12:14 PM IST
ಅಫಜಲಪುರ: ತಾಲೂಕಿನಲ್ಲಿ 260 ಅಂಗನವಾಡಿ ಕೇಂದ್ರಗಳಿದ್ದು ಅವುಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತುಕೊಟ್ಟು ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೀನಾಕ್ಷಮ್ಮ ಪಾಟೀಲ ತಿಳಿಸಿದರು.
ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಅವರು ಮೂಲಭೂತ ಸೌಕರ್ಯಗಳ ಕೊರತೆ ಇರುವ ಅಂಗನವಾಡಿ ಕೇಂದ್ರಗಳಿಗೆ ಹತ್ತು ದಿನಗಳಲ್ಲಿ ಫ್ಯಾನ್, ವಿದ್ಯುತ್, ಶೌಚಾಲಯ, ಕಂಪೌಂಡ್ ಸೇರಿದಂತೆ ಮುಂತಾದ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ 82 ಅಂಗನವಾಡಿಗಳಿಗೆ ಶೌಚಾಲಯಗಳು ಮಂಜೂರಾಗಿದ್ದು, ಕಾರ್ಯಕರ್ತೆಯರು ಶೌಚಾಲಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಗುಣಮಟ್ಟ ಪರಿಶೀಲಿಸಿ ಇಲಾಖೆ ಗಮನಕ್ಕೆ ತರಬೇಕು ಎಂದು ಹೇಳಿದರು.
ಮಕ್ಕಳನ್ನು ಪೌಷ್ಟಿಕವಾಗಿ ಬೆಳೆಸಲು ಸರ್ಕಾರದಿಂದ ಬರುವ ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಪ್ಪದೇ ಎಲ್ಲ ಮಕ್ಕಳಿಗೆ ವಿತರಿಸಬೇಕು. ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಮೂಲಕ ಹಾಗೂ ಸರ್ಕಾರದಿಂದ ಬರುವ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅಕ್ರಮವಾಗಿ ಅಂಗನವಾಡಿ ಆಹಾರ ಪದಾರ್ಥಗಳ ಸಾಗಾಣಿಕೆ ನಡೆಯುತ್ತಿದೆ ಎಂದು ಹಲವಾರು ಆರೋಪಗಳು ಕೇಳಿಬರುತ್ತಿವೆ. ಇದರಿಂದಾಗಿ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಆದ್ದರಿಂದ ಇನ್ನು ಮುಂದೆ ಯಾರೂ ಇಂತಹ ಕೃತ್ಯಕ್ಕೆ ಕೈಹಾಕಬೇಡಿ. ಹಾಗೆ ನಡೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಹಿರಿಯ ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ ಡೆಗ್ಗಿ, ಗುರುಬಾಯಿ ಮುದ್ದೇಬಿಹಾಳ, ಅಂಗನವಾಡಿ ಕಾರ್ಯಕರ್ತೆ ಅನುಸುಬಾಯಿ ಸುತಾರ್, ಮಹಾನಂದ ತಳವಾರ, ಪ್ರಭಾವತಿ ನೆಲೋಗಿ, ಕಾಶಿಬಾಯಿ ಕುಲಕರ್ಣಿ, ಮಹಾದೇವಿ ರಾಠೊಡ, ಅಂಬೂಬಾಯಿ ಕುಂಬಾರ, ಮಾಹನಂದ ಶೇಖಧಾರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.