ಅ. 25ರಂದು ಎಪಿಎಂಸಿ ಬಂದ್
ಎಪಿಎಂಸಿ ಪ್ರಾಂಗಣದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು
Team Udayavani, Oct 10, 2021, 9:43 AM IST
ಕಲಬುರಗಿ: ನಗರದ ಎಪಿಎಂಸಿ ಪ್ರಾಂಗಣದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ವ್ಯಾಪಾರ ವಾಹಿವಾಟಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಅ.25ರಂದು ಆಹಾರ ಧ್ಯಾನ ಮತ್ತು ಬೀಜ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಎಪಿಎಂಸಿ ಪ್ರಾಂಗಣವನ್ನು ಎಪಿಎಂಸಿಯೇತರ ಕೆಲಸ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ. ಇದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ರೈತರು ಮತ್ತು ಅವರ ವಾಹನ ಓಡಾಟಕ್ಕೆ ತೊಂದರೆ ಅನುಭವಿಸುವಂತೆ ಆಗಿದೆ. ಜತೆಗೆ ಪ್ರಾಂಗಣದ ವ್ಯಾಪಾರ ವಹಿವಾಟಿನ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಸಂಘದ ಅಧ್ಯಕ್ಷ ಶ್ರೀಮಂತ ಉದನೂರ, ಗೌರವ ಕಾರ್ಯದರ್ಶಿ ಸಂತೋಷ ಲಂಗರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಪ್ರಾಂಗಣದಲ್ಲಿ ಅನಧಿಕೃತ ವಾಹನಗಳ ಸಂಚಾರ ನಿಲ್ಲಿಸಬೇಕು. ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅಲ್ಲದೇ, ಪ್ರಾಂಗಣದಲ್ಲಿ ಕಳ್ಳತನ, ದರೋಡೆ, ಜೂಟಾಟ ಸೇರಿದಂತೆ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು-ಸುವ್ಯವಸ್ಥೆ ಭದ್ರಪಡಿಸಬೇಕು. ರಾತ್ರಿ ವೇಳೆ ಪೊಲೀಸ್ ಗಸ್ತು ವ್ಯವಸ್ಥೆಯನ್ನು ನಿರಂತರವಾಗಿ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಅ.25ರೊಳಗೆ ಯಾವುದಾದರೂ ಕ್ರಮ ತೆಗೆದುಕೊಂಡು ಎಪಿಎಂಸಿ ಪ್ರಾಗಂಣದಲ್ಲಿ ವ್ಯಾಪಾರ ವಹಿವಾಟಿಗೆ ಉತ್ತಮ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಅಂದು ಎಪಿಎಂಸಿ ಮುಖ್ಯದ್ವಾರ ಮುಚ್ಚಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ, ಮುರುಗೇಶ ನಿರಾಣಿ, ಎಂಪಿಎಂಸಿ ನಿರ್ದೇಶಕರು, ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.