![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 7, 2022, 12:03 PM IST
ಜೇವರ್ಗಿ: ತಾಲೂಕಿನ ಸರಕಾರಿ ಶಾಲೆಗಳ ಸುಧಾರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕಳೆದ ಮೇ 16 ರಂದು ಶಾಲೆಗಳು ಆರಂಭವಾಗಿ, ಪಾಠ ಪ್ರವಚನಗಳು ನಡೆಯುತ್ತಿವೆ. ಆದರೆ ಮಕ್ಕಳಿಗೆ ಕುಳಿತುಕೊಳ್ಳಲು ಸೂಕ್ತ ಆಸನದ, ಕೊಠಡಿಗಳ ಕೊರತೆ ಎದ್ದು ಕಾಣುತ್ತಿದೆ. ಬಿರುಕು ಬಿಟ್ಟ ಗೋಡೆ, ಸಿಮೆಂಟ್ ಉದುರುತ್ತಿರುವ ಮೇಲ್ಛಾವಣಿ, ಸುಣ್ಣ ಬಣ್ಣ ಕಾಣದ ಗೋಡೆಗಳು, ಗಾಳಿ ಬೆಳಕಿನ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಶಾಲೆಗೆ ಹೋಗುವಂತಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶಾಲೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದರೂ ಸರಕಾರಿ ಶಾಲೆಗಳ ಸುಧಾರಣೆ ಆಗುತ್ತಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಂಪೌಂಡ್ ಗೋಡೆ, ಮೈದಾನ ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದರೂ ಅಭಿವೃದ್ಧಿ ಆಗುತ್ತಿಲ್ಲ. ಮಳೆಗಾಲ ಆರಂಭವಾಗುತ್ತಿದ್ದೂ, ಕೂಡಲೇ ಸಂಬಂಧಪಟ್ಟವರು ತಾಲೂಕಿನಲ್ಲಿರುವ ಶಾಲೆಗಳ ಕಟ್ಟಡ ಸುಧಾರಣೆ ಜತೆಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಮನವಿ ಪತ್ರದ ಮೂಲಕ ಆಗ್ರಹಿಸಲಾಯಿತು.
ಆಮ್ ಆದ್ಮಿ ಪಕ್ಷದ ಮುಖಂಡರಾದ ಬಸವರಾಜ ಹರವಾಳ, ಹಬೀಬ ಜಮಾದಾರ, ದೌಲತ್ತರಾಯ ಕುಂಬಾರ, ಪರಮಾನಂದ ಯಲಗೋಡ, ಕಾಶಿಂ ಕೂಡಿ, ಫರೀದ್‌ಸಾಬ, ಎಂ.ಎಂ. ಶಿರಹಟ್ಟಿ, ತಿಪ್ಪಣ್ಣ ಹುಲ್ಲೂರ, ಸಿದ್ದಣ್ಣ ಆದ್ವಾನಿ, ಮಲ್ಲಪ್ಪ ಅಂದಾ, ಶಿವಮಲ್ಲಪ್ಪ ಪೂಜಾರಿ, ಸಾಜೀದ್ ಗಂವ್ಹಾರ, ನಜೀರ ಪಾಶಾ, ವಿವೇಕಾನಂದ ಸೇರಿದಂತೆ ಮತ್ತೀತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.