ಆದಿ ಬಣಜಿಗರಿಗೆ 2ಎ ಮೀಸಲಾತಿ ನೀಡಲು ಮನವಿ


Team Udayavani, Dec 27, 2021, 11:06 AM IST

4adibanaji

ಕಲಬುರಗಿ: ಹಿಂದುಳಿದ ಆದಿ ಬಣಜಿಗ ಜಾತಿಯನ್ನು ಗೆಜೆಟ್‌ನಲ್ಲಿ ಸೇರ್ಪಡೆಗೊಳಿಸಿ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಆದಿ ಬಣಜಿಗ ಯುವ ವೇದಿಕೆಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಕುರಿತು ಜಿಲ್ಲಾ ಆದಿ ವೀರಶೈವ ಸಮಾಜದ ಅಧ್ಯಕ್ಷ ಬಸವರಾಜ ಕೊನೆಕ್‌, ಕಾರ್ಯದರ್ಶಿ ಸೋಮಶೇಖರ ಟೆಂಗಳಿ ಹೇಳಿಕೆಯೊಂದನ್ನು ಹೊರಡಿಸಿ, ಬೊಮ್ಮಾಯಿ ಅವರಿಗೆ ಸಮಾಜದ ನಿಯೋಗದೊಂದಿಗೆ ಭೇಟಿಯಾಗಿ ಬೇಡಿಕೆ ಸಲ್ಲಿಸಲಾಗಿದೆ. ಪ್ರಮುಖವಾಗಿ ವೀರಶೈವ ಲಿಂಗಾಯಿತ 19 ಉಪ ಜಾತಿಗಳಲ್ಲಿ ಆದಿ ಬಣಜಿಗ ಜಾತಿಯನ್ನು 2009ರ ಗೆಜೆಟ್‌ನಲ್ಲಿ ಸೇರ್ಪಡೆಗೊಳಿಸಿ, ಶೇ. 5ರ ಮೀಸಲಾತಿ ನಿಗದಿಗೊಳಿಸಲಾಗಿತ್ತು. ನಂತರ ಈ ಆದೇಶ ಹಿಂದಕ್ಕೆ ಪಡೆದು ಸಮಾಜಕ್ಕೆ ಅನ್ಯಾಯ ಮಾಡಿರುವುದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆದಿ ಬಣಜಿಗ ಸಮುದಾಯವನ್ನು ಪ್ರವರ್ಗ 2ಎ ಮೀಸಲಾತಿಯಡಿ ಹಿಂದುಳಿದ ವರ್ಗಕ್ಕೆ ಸೇರಿಸಬಹುದು ಎಂಬುದಾಗಿ ಶಿಫಾರಸು ಸಹ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆದ್ದರಿಂದ ಜಾತಿ ಗೆಜೆಟ್‌ನಲ್ಲಿ ಆದಿ ಬಣಜಿಗ ಸಮಾಜ ಸೇರಬೇಕು. ಮುಂಬೈ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟ 1893ರ ಮಹಾರಾಷ್ಟ್ರದ ಗೆಜೆಟ್‌ನಲ್ಲಿ ಆದಿ ಬಣಜಿಗ ಎಂದು ನಮೂದಿಸಿರುವುದನ್ನು ದಾಖಲೆ ಸಮೇತ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಕೊನೆಕ್‌, ಟೆಂಗಳಿ ವಿವರಣೆ ನೀಡಿದ್ದಾರೆ.

ನಿಯೋಗದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷ ರಾಜು ನವಲದಿ, ಉಪಾಧ್ಯಕ್ಷ ವಿ.ಜಿ. ಗೌನಳ್ಳಿ, ಕಾರ್ಯದರ್ಶಿ ಸತೀಶ ಪಾಟೀಲ ಆಲಗೂಡ, ಅಪ್ಪಾರಾವ್‌ ಪಾಟೀಲ ಮರತೂರ, ರಾಜೇಂದ್ರ ಕರೆಕಲ್‌, ಶಿವಪುತ್ರಪ್ಪ ಬುರುಡೆ, ಶಾಂತಪ್ಪ ಪಾಟೀಲ ಕಣ್ಣೂರ, ಭೀಮರಾವ್‌ ಕೊಳ್ಳುರ, ಚಂದ್ರಕಾಂತ ಪಾಟೀಲ ಚಲಗೇರಾ, ಚಂದ್ರಕಾಂತ ಪಾಟೀಲ, ಮಹಾದೇವಪ್ಪ ಪಾಟೀಲ ಮುಂತಾದವರಿದ್ದರು.

ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಎಂಎಲ್‌ಸಿ ಬಿ.ಜಿ. ಪಾಟೀಲ, ಶಾಸಕರಾದ ಬಸವರಾಜ ಮತ್ತಿಮಡು, ಸಿದ್ಧು ಸವದಿ ಮುಂತಾದವರಿದ್ದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.