ಪೋಲಕಪಳ್ಳಿ ಗ್ರಾಮಕ್ಕೆ ಸೌಕರ್ಯ ಒದಗಿಸಲು ಆಗ್ರಹ
Team Udayavani, May 13, 2022, 2:59 PM IST
ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಅನೇಕ ಸಲ ಸರ್ಕಾರಕ್ಕೆ ಮತ್ತು ಶಾಸಕರಿಗೆ ಮನವಿ ಪತ್ರಗಳನ್ನು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೋಸಿಹೋದ ಗ್ರಾಮದ ಹಿರಿಯ ವಕೀಲ ನಂದಕುಮಾರ ಪಾಟೀಲ ಶಾಸಕರ ಕಾರ್ಯಾಲಯದ ಎದುರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ.
ತಾಲೂಕು ಕೇಂದ್ರ ಸ್ಥಾನದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿರುವ ಪೋಲಕಪಳ್ಳಿ ಗ್ರಾಮದ ಜನರಿಗೆ ಮೂಲ ಸೌಕರ್ಯ ನೀಡುವಂತೆ ಗ್ರಾಪಂ ಕಚೇರಿ, ತಹಶೀಲ್ದಾರ್ ಕಚೇರಿ, ಶಾಸಕರ ಕಚೇರಿ ಎದುರು ಅನೇಕ ಸಲ ಸತ್ಯಾಗ್ರಹ ನಡೆಸಲಾಗಿದೆ. ಆದರೆ ಆ ಸಂದರ್ಭದಲ್ಲಿ ಅಧಿಕಾರಿಗಳು, ಶಾಸಕರು ನೀಡಿದ ಆಶ್ವಾಸನೆಯಿಂದ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಮೂಲ ಸೌಕರ್ಯಗಳನ್ನು ಮಂಜೂರಿಗೊಳಿಸದೇ ಇರುವುದರಿಂದ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗ್ರಾಮದ ಮುಖ್ಯರಸ್ತೆ ಡಾಂಬರೀಕರಣ ಮಾಡುವುದು, ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಚರಂಡಿ ವ್ಯವಸ್ಥೆ, ಸಿಮೆಂಟ್ ರಸ್ತೆ, ಮುಲ್ಲಾಮಾರಿ ನದಿಯಿಂದ ಅಕ್ರಮವಾಗಿ ಮರಳು ದಂಧೆ ನಿಲ್ಲಿಸುವುದು ಸೇರಿದಂತೆ 11 ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಶಾಸಕರ ನಿರ್ಲಕ್ಷ್ಯತನ ಗ್ರಾಪಂ ಅಧ್ಯಕ್ಷ ಮತ್ತು ಪಿಡಿಒ ಬೇವಾಬ್ದಾರಿತನ, ಅಧಿಕಾರಿಗಳ ಸುಳ್ಳು ಭರವಸೆಗಳಿಂದ ರೋಸಿಹೋಗಿ ಅನಿವಾರ್ಯವಾಗಿ ಶಾಸಕರ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಯುವ ವಕೀಲ ನಂದಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.