ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಗೊಂಡ ಸಮಿತಿಯಿಂದ ಧರಣಿ
Team Udayavani, Mar 10, 2022, 10:20 AM IST
ಚಿಂಚೋಳಿ: ಸಿಂಧುತ್ವ ಪ್ರಮಾಣಪತ್ರ ಹಾಗೂ ಗೊಂಡ ಜಾತಿಗೆ ಎಸ್‌ಟಿ ಪ್ರಮಾಣ ಪತ್ರ ತಡೆ ಹಿಡಿದಿರುವ ಬಗ್ಗೆ ಸಿಆರ್‌ಎಲ್ ಸುತ್ತೋಲೆ ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಗೊಂಡ ಸಂಘರ್ಷ ಸಮಿತಿ ತಾಲೂಕು ಮುಖಂಡರು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಬುಧವಾರದಿಂದ ಆರಂಭಿ ಸಿದ್ದಾರೆ.
ಧರಣಿ ಸತ್ಯಾಗ್ರಹದಲ್ಲಿ ಗೊಂಡ ಸಮಾಜದ ಮುಖಂಡ ರೇವಣಸಿದ್ಧಪ್ಪ ಅಣಕಲ್ ಮಾತನಾಡಿ, ರಾಜ್ಯದಲ್ಲಿ ಗೊಂಡ ಸಮಾಜಕ್ಕೆ ಎಸ್‌ಟಿ ಪ್ರಮಾಣ ಪತ್ರ ಕೊಡದೆ ಬಿಜೆಪಿ ಸರ್ಕಾರ ಅನ್ಯಾಯ ಎಸಗುತ್ತಿದೆ. ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿ ಗೊಂಡ ಜನಾಂಗದವರಿದ್ದಾರೆ. ಅನೇಕ ತಲೆಮಾರುಗಳಿಂದ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಪಡೆದು ಅನೇಕ ಸರ್ಕಾರಿ ಹುದ್ದೆಗಳಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕವಾಗಿ, ರಾಜಕೀಯವಾಗಿಯೂ ಇದರ ಲಾಭ ಪಡೆಯುತ್ತಿದ್ದೇವೆ. ಆದರೆ ಬಿಜೆಪಿ ಸರ್ಕಾರ ಕಳೆದ 30 ಆಗಸ್ಟ್ 2021ರಂದು ಹೊರಡಿಸಿದ ಆದೇಶದಿಂದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ಹಣಮಂತ ಪೂಜಾರಿ ಮಾತನಾಡಿ, ಸರ್ಕಾರದ ಈ ಆದೇಶದಿಂದ ಸರ್ಕಾರಿ ನೌಕರಿಗೆ ನೇಮಕವಾಗಿರುವ ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖಂಡರಾದ ರವೀಂದ್ರ ಪೂಜಾರ, ಗಂಗಾಧರ ಗಡ್ಡಿಮನಿ, ರಾಮಚಂದ್ರ, ರವಿಕುಮಾರ ಕುಂಚಾವರಂ, ಸಂತೋಷ ಕುಮಾರ ಮಾಳಪ್ಪನೋರ, ಚಿಮ್ಮಾ ಏಇದಲಾಯಿ ಮಹಾದೇವ, ಗೋಪಾಲ ಪೂಜಾರಿ, ಸುರೇಶ ವೈದ್ಯರಾಜ, ಶಿವಕುಮಾರ ಪೋಚಾಲಿ, ರಾಜಕುಮಾರ ಕನಕಪೂರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.