ಬಸವಣ್ಣನ ತತ್ವ -ಸಿದ್ದಾಂತ ಸಮಾಜಕ್ಕೆ ಮಾರ್ಗದರ್ಶಿ
Team Udayavani, May 4, 2022, 10:04 AM IST
ಚಿತ್ತಾಪುರ: ಹನ್ನೆರಡನೇ ಶತಮಾನದ ಬಸವಣ್ಣನವರು ಪ್ರತಿಪಾದಿಸಿದ ತತ್ವ ಸಿದ್ದಾಂತಗಳು ಮಾನವ ಸಮಾಜಕ್ಕೆ ಮಾರ್ಗದರ್ಶಕವಾಗಿ ಬೆಳಕನ್ನು ಬೀರುವಂತಿವೆ ಎಂದು ತೊನಸನಳ್ಳಿ.ಎಸ್ ಅಲ್ಲಂಪ್ರಭು ಪೀಠದ ಶ್ರೀ ಮಲ್ಲಣ್ಣಪ್ಪ ಸ್ವಾಮೀಜಿ ಹೇಳಿದರು.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಸಮಾನತೆಯ ವಿರುದ್ಧ ಸಮಾಜದ ಕ್ರಾಂತಿಕಾರಿ ಬದಲಾವಣೆಯಲ್ಲಿ ಬಸವಣ್ಣನವರ ಕೊಡುಗೆ ಅಪಾರ. ಸಮಾಜದಲ್ಲಿ ಜಾತಿ ಪದ್ಧತಿ ನಿರ್ಮೂಲನೆ ಮಾಡಿ ಸಾಮಾಜಿಕ ನ್ಯಾಯಕ್ಕೆ ಹೋರಾಡಿ ಇಡೀ ಮನುಕುಲಕ್ಕೆ ದಾರಿ ದೀಪವಾಗಿದ್ದಾರೆ. ಬಸವಣ್ಣನವರ ಕಾಯಕ ತತ್ವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಸಿಕೊಳ್ಳಬೇಕು ಎಂದು ಹೇಳಿದರು.
ಪ್ರಸ್ತುತ ಕಾಲದಲ್ಲಿ ಪ್ರತಿಷ್ಠೆಗೆ ಒಳಗಾಗಿ ಸಿಕ್ಕಾಪಟ್ಟಿ ಹಣ ಖರ್ಚು ಮಾಡಿ ಅದ್ಧೂರಿ ಮದುವೆ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲಿ ವಿನಾಕಾರಣ ದುಂದು ವೆಚ್ಚ ಮಾಡದೇ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಚಿತ ಮದುವೆ ಮಾಡಿಕೊಂಡು ಸುಖ ಸಂಸಾರದ ಜೀವನ ಸಾಗಿಸಬೇಕು. ಈ ನಿಟ್ಟಿನಲ್ಲಿ ಚಿತ್ತಾಪುರಲ್ಲಿ ಕಳೆದ ಎಂಟು ವರ್ಷಗಳಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡುತ್ತಿರುವ ನಾಗರೆಡ್ಡಿ ಪಾಟೀಲ ಕರದಾಳ ಮತ್ತು ಅವರ ತಂಡದ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಂಬತ್ತು ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ತಹಶೀಲ್ದಾರ್ ಉಮಾಕಾಂತ ಹಳ್ಳೆ, ಸಿಪಿಐ ಪ್ರಕಾಶ ಯಾತನೂರ, ದಿಗ್ಗಾಂವ ಶ್ರೀ ಸಿದ್ದವೀರ ಶಿವಾಚಾರ್ಯರು, ದಂಡಗುಂಡ ಶ್ರೀ ಸಂಗನಬಸವ ಶಿವಾಚಾರ್ಯರು, ಅಳ್ಳೋಳ್ಳಿ ಶ್ರೀ ಸಂಗಮನಾಥ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಶಿವಾನಂದ ಪಾಟೀಲ, ರಮೇಶ ಮರಗೋಳ, ಬಸವರಾಜ ಬೆಣ್ಣೂರಕರ್, ಅಣ್ಣಾರಾವ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಡಾ| ಚಂದ್ರಶೇಖರ ಕಾಂತಾ, ಎಸ್. ಎನ್. ಪಾಟೀಲ, ಗೋಪಾಲ ರಾಠೊಡ, ವೀರಣ್ಣಗೌಡ ಪರಸರೆಡ್ಡಿ, ಅರವಿಂದ ಚವ್ಹಾಣ, ಶರಣಪ್ಪ ನಾಟೀಕಾರ, ನಾಗರಾಜ ಭಂಕಲಗಿ, ವಿನೋದ ಗುತ್ತೇದಾರ, ಬಸವರಾಜ ಚಿನ್ನಮಳ್ಳಿ, ಅಶೋಕ ನಿಪ್ಪಾಣಿ, ರಾಮರೆಡ್ಡಿ, ನಾಗರೆಡ್ಡಿ ಗೋಪಸೇನ್, ರವೀಂದ್ರರೆಡ್ಡಿ ಭಂಕಲಗಿ, ಯಂಕಪ್ಪ ಜೋಲಕರ್, ರಾಜಣ್ಣ ಕರದಾಳ, ಅಂಬರೀಶ ಸುಲೇಗಾಂವ, ಆನಂದ ಪಾಟೀಲ ನರಬೋಳ, ಐಲರೆಡ್ಡಿ ಅಳ್ಳೋಳ್ಳಿ, ಗಿರೀಶ ಪಾಲಪ್, ಇತರರು ಇದ್ದರು. ಸಮಿತಿ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಾಂತಣ್ಣ ಚಾಳೀಕಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.