ಬೀದರನಲ್ಲಿ ನಿನ್ನೆಯೂ ಸೋಂಕಿತರು ಪತ್ತೆ

ಹೆಲ್ತ್‌ ಬುಲೇಟಿನ್‌ನಲ್ಲಿ ಮಾತ್ರ ಶೂನ್ಯ ಅನುಮಾನ ಹೆಚ್ಚಿಸಿದ ಆರೋಗ್ಯ ಇಲಾಖೆ ವರದಿ

Team Udayavani, Jun 4, 2020, 11:28 AM IST

04-June-05

ಬೀದರ: ಗಡಿ ಜಿಲ್ಲೆ ಬೀದರನ ವಿವಿಧ ತಾಲೂಕುಗಳಲ್ಲಿ ಬುಧವಾರ 25ಕ್ಕೂ ಹೆಚ್ಚು ಮಹಾಮಾರಿ ಕೋವಿಡ್ ಸೋಂಕಿತರ ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳೇ ದೃಢಪಡಿಸಿದ್ದಾರೆ. ಆದರೆ, ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ನಲ್ಲಿ ಪಾಟಿಸಿವ್‌ ಸಂಖ್ಯೆ ಶೂನ್ಯ ತೋರಿಸಿರುವುದು ಹಲವು ಅನುಮಾನ ಮತ್ತು ಆತಂಕ ಹೆಚ್ಚುವಂತೆ ಮಾಡಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ ಔರಾದ, ಭಾಲ್ಕಿ ಮತ್ತು ಬಸವಕಲ್ಯಾಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಷ್ಟೇ ಅಲ್ಲ ಆಯಾ ಗ್ರಾಮಗಳನ್ನು ಸಿಲ್‌ಡೌನ್‌ ಸಹ ಮಾಡಲಾಗಿದೆ. ಆದರೆ, ಸಂಜೆ ಹೊತ್ತಿಗೆ ಬಿಡುಗಡೆ ಮಾಡಿರುವ ಬುಲೇಟಿನ್‌ನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣಗಳು ಇರುವುದು ಉಲ್ಲೇಖವೇ ಆಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸಹ ಸ್ಪಷ್ಟನೆ ನೀಡುತ್ತಿಲ್ಲ. ಕಳೆದೊಂದು ವಾರದಿಂದ ಮಹಾರಾಷ್ಟ್ರದ ನಂಟಿನಿಂದಾಗಿ ಜಿಲ್ಲೆಗೆ ಕಂಟಕವಾಗುತ್ತಿದ್ದು, ಸೋಂಕಿತರ ಸಂಖ್ಯೆಯೂ ಹೆಚ್ಚಾಗಿ ಈಗ ಬೀದರ ರಾಜ್ಯದ ಟಾಪ್‌ 10 ಜಿಲ್ಲೆಗಳ ಪಟ್ಟಿಗೆ ಸೇರಿರುವುದು ಭೀತಿಯನ್ನುಂಟು ಮಾಡುತ್ತಿದೆ.

ಜಿಲ್ಲೆಯಲ್ಲಿ ಇನ್ನೂ 5339 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಮಹಾರಾಷ್ಟ್ರದ ಮುಂಬೈ ಮತ್ತು ಪುಣೆ ಸಂಪರ್ಕದಿಂದ ಬೀದರ ಜಿಲ್ಲೆಯ ಹಳ್ಳಿ ಹಳ್ಳಿಗೂ ವೈರಾಣು ಹಬ್ಬಿದ್ದು, ಬಸವಕಲ್ಯಾಣ, ಭಾಲ್ಕಿ ಮತ್ತು ಚಿಟಗುಪ್ಪ ತಾಲೂಕಿನಲ್ಲಿ ಅತಿಯಾಗಿ ಬಾಧಿಸುತ್ತಿರುವುದು ಕ್ಷೇತ್ರದ ಜನರಲ್ಲಿ ಆತಂಕ ಅಧಿಕವಾಗಿದೆ.

ಬೀದರ ಜಿಲ್ಲೆಯಲ್ಲಿ ಇನ್ನೂ ಕೊರೊನಾ ಶಂಕಿತ 5339 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 28,120 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 22606 ಮಂದಿಯದ್ದು ನೆಗೆಟಿವ್‌ ಬಂದಿದೆ. ಕೋವಿಡ್ ಶಂಕಿತ 106 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 70 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಲ್ತ್‌ ಬುಲೇಟಿನ್‌ ತಿಳಿಸಿದೆ.

23 ಕಂಟೈನ್ಮೆಂಟ್‌ ಝೋನ್‌: ಜಿಲ್ಲೆಯಲ್ಲಿ ಈಗ ಕಂಟೈನ್ಮೆಂಟ್‌ ಝೋನ್‌ಗಳ ಸಂಖ್ಯೆಯೂ 23ಕ್ಕೆ ಏರಿಕೆಯಾಗಿದೆ. ಬೀದರನ ಓಲ್ಡ್‌ ಸಿಟಿ, ಅಂಬೇಡ್ಕರ ಕಾಲೋನಿ, ಎದೇನ್‌ ಕಾಲೋನಿ, ಮೈಲೂರ, ವಿದ್ಯಾನಗರ, ಕುಂಬಾರವಾಡಾ(ಪಾಟೀಲ ನಗರ), ಗ್ರಾಮಗಳಾದ ಧನ್ನೂರ(ಕೆ) ವಾಡಿ, ಚಿಟಗುಪ್ಪದ ದತ್ತಗೀರ ಮೊಹೊಲ್ಲಾ, ಹುಣಸಗೇರಾ, ಚಳಕಾಪುರ, ಭಾತಂಬ್ರಾ, ಹಲ್ಸಿ(ಎಲ್‌), ಹಳ್ಳಿಖೇಡ(ಬಿ), ಉಜಳಂಬ, ಲಾಲಧರಿ ತಾಂಡಾ, ಹಣಕುಣಿ, ಕೋಹಿನೂರ, ಬೆಟಗೇರಾ, ಲಾಡವಂತಿ, ಗದ್ಲೇಗಾಂವ(ಕೆ), ಶಿರಗುರ, ಹತ್ಯಾಳ ಮತ್ತು ಹುಮನಾಬಾದನ ಜೋಶಿ ಗಲ್ಲಿಯಲ್ಲಿ ಲಾಕ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.