ಮಾಸ್ಕ್ ಧರಿಸದವರಿಗೆ ದಂಡ ಹಾಕಿ

ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಡಿಸಿ ರಾಮಚಂದ್ರನ್‌ ಸೂಚನೆ ಐಎಲ್‌ಐ-ಸಾರಿ ಪ್ರಕರಣ ಪತ್ತೆಗೆ ಸಮೀಕ್ಷೆ ಮಾಡಿ

Team Udayavani, Jul 1, 2020, 12:24 PM IST

01-July-09

ಬೀದರ: ಕೋವಿಡ್‌-19 ಸೋಂಕು ತಗುಲದಂತೆ ಮುಂಜಾಗ್ರತೆಗಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಮಾಸ್ಕ್ ಧರಿಸದವಿರಗೆ ದಂಡ ವಿಧಿಸುವ ಕಾರ್ಯಾಚಾರಣೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ತಹಶೀಲ್ದಾರ್‌ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ಕಾರ್ಯಾಚರಣೆ ವೇಗಗೊಳಿಸಬೇಕು. ಜಿಲ್ಲೆಯ ಎರಡು ನಗರಸಭೆಗಳು, ನಾಲ್ಕು ಪುರಸಭೆಗಳು ಮತ್ತು ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಾಚಾರಣೆ ತೀವ್ರಗೊಳ್ಳಬೇಕು. ನಿಯಮ ಉಲ್ಲಘಿಸಿದವರಿಗೆ ಯಾವುದೇ ಮುಲಾಜಿಲ್ಲದೇ ದಂಡ ವಿಧಿಸಿ ಚುರುಕು ಮುಟ್ಟಿಸಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ನಿತ್ಯ ವರದಿ ಸಲ್ಲಿಸಬೇಕು. ಈ ಮಾಹಿತಿ ಲಭ್ಯವಾದಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣಗಳಿರುವವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿ ಕೋವಿಡ್‌ ಹರಡದಂತೆ ನೋಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಎಲ್ಲ ತಾಲೂಕಿನ ಖಾಸಗಿ ಆಸ್ಪತ್ರೆಗಳ ವೈದ್ಯರು ಗಮನ ಹರಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ಪ್ರತಿದಿನ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸಿ ವರದಿ ಸಲ್ಲಿಸಬೇಕು. ಜಿಲ್ಲಾ ಮಟ್ಟದಲ್ಲಿರುವ ಹಿರಿಯ ವೈದ್ಯಾಧಿಕಾರಿಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಕಂಟೈನ್ಮೆಂಟ್‌ ಝೋನ್‌ ವ್ಯಾಪ್ತಿಯಲ್ಲಿ ಐಎಲ್‌ಐ, ಸಾರಿ ಪ್ರಕರಣಗಳನ್ನು ಗುರುತಿಸಲು ಮನೆಮನೆ ಸಮೀಕ್ಷೆ ಕಾರ್ಯ ತೀವ್ರಗೊಳಿಸಬೇಕು. ಆ ಪ್ರದೇಶದಲ್ಲಿನ ಐಎಲ್‌ಐ, ಸಾರಿ ಪ್ರಕರಣಗಳು ಮತ್ತು ಗರ್ಭೀಣಿಯರು, ಹತ್ತು ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳು, 60 ವರ್ಷ ಮೇಲ್ಪಟ್ಟವರನ್ನು ಮತ್ತೆ ಹಚ್ಚಿ ಮುಂದಿನ ಕ್ರಮ ಜರುಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಎಸ್‌ಪಿ ಡಿ.ಎಲ್‌.ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್‌ ಮೀನಾ, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.