ರಮೇಶಕುಮಾರ ಹೇಳಿಕೆಗೆ ಬಿಜೆಪಿ ಮೋರ್ಚಾ ಖಂಡನೆ
Team Udayavani, Dec 20, 2021, 12:52 PM IST
ಶಹಾಬಾದ: ವಿಧಾನಸಭೆ ಅಧಿವೇಶನದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಭಾಪತಿ ರಮೇಶಕುಮಾರ ಅವರನ್ನು ಪಕ್ಷದಿಂದಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೋರ್ಚಾ ಜಿಲ್ಲಾಧ್ಯಕ್ಷ ಭಾಗಿರಥಿ ಗುನ್ನಾಪುರ ಮತ್ತು ನಗರಾಧ್ಯಕ್ಷೆ ಜಯಶ್ರೀ ಸೂಡಿ ನೇತೃತ್ವದಲ್ಲಿ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು. ನಂತರ ತಹಶೀಲ್ದಾರ್ ಸುರೇಶ ವರ್ಮಾಗೆ ಮನವಿ ಸಲ್ಲಿಸಲಾಯಿತು.
ರಮೇಶಕುಮಾರ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಸಮಾಜಕ್ಕೆ ಅವಮಾನಿಸಿದ್ದಾರೆ. ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಡಿರುವ ಮಾತುಗಳಿಂದ ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ಹೇಳಿಕೆ ನೀಡಿ ಕ್ಷಮೆಯಾಚಿಸಿದ್ದಾರೆ. ಆದರೆ ಇಂತಹ ಹೇಳಿಕೆ ನೀಡಿದ್ದೇ ತಪ್ಪು. ಅವರನ್ನು ಪಕ್ಷದಿಂದಲೇ ವಜಾಗೊಳಿಸಿ ಎಂದು ಒತ್ತಾಯಿಸಿದರು.
ಮುಖಂಡರಾದ ಆರತಿ, ಸುನೀತಾ, ಸಂತೋಷಿ, ಸರಸ್ವತಿ, ಶ್ರೀದೇವಿ, ಮಂಜುಳಾ, ಮೆಹಬೂಬೆ, ಲಾಲಬಿ, ಸಯ್ಯದಾ ಬಿ., ಲಕ್ಷ್ಮೀಬಾಯಿ, ಶೋಭಾ, ಮಹಾದೇವಿ, ಬಸಮ್ಮ, ನಾದಾ, ಜಯಶ್ರೀ ಜಿ., ಗಂಗಮ್ಮ, ಮಹಾಂತಮ್ಮ, ಅನುಪಮಾ, ಪ್ರಗತಿ, ಜಗದೇವಿ, ಪ್ರೇಮಾ, ಭದ್ರಸೇನಾ, ಯಾಸ್ಮಿನ್, ಕನಕಪ್ಪ ದಂಡಗುಲಕರ್, ದಿನೇಶ ಗೌಳಿ, ವಿರೇಶ ಬಂದಳ್ಳಿ, ದೇವೆಂದ್ರಪ್ಪ ಯಲಗೋಡಕರ್, ಸದಾನಂದ ಕುಂಬಾರ, ಸುಭಾಷ ಜಾಪೂರ, ಬಸವರಾಜ ಬಿರಾದಾರ, ಶಿವಾಜಿ, ಸಂಜಯ ವಿಟಕರ್, ಜಗದೀಶ ಪಾಟೀಲ ಹಾಗೂ, ಮುಖಂಡರು ಬಿಜೆಪಿ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.