ಪಾಲಿಕೆ ಅಧಿಕಾರಕ್ಕಾಗಿ ಬಿಜೆಪಿ ಕುತಂತ್ರ: ಶರಣಪ್ರಕಾಶ್‌


Team Udayavani, Nov 14, 2021, 12:04 PM IST

8politics

ಕಲಬುರಗಿ: ಚುನಾವಣೆಯಲ್ಲಿ ಮತದಾರ ಬಹುಮತ ಕೊಡದಿದ್ದರೂ ಪಾಲಿಕೆಯಲ್ಲಿ ಈ ಸಲ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂಬ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಾಗ್ಧಾಳಿ ನಡೆಸಿದೆ.

ವಿಧಾನ ಪರಿಷತ್‌ ಸದಸ್ಯರಾದ ಲಕ್ಷ್ಮಣ ಸವದಿ, ಭಾರತಿ ಶೆಟ್ಟಿ, ಸಾಯಬಣ್ಣ ತಳವಾರ, ಲೇಹರಸಿಂಗ್‌, ಪ್ರತಾಪಸಿಂಹ ನಾಯಕ್‌, ರಘುನಾಥ ಮಲ್ಕಾಪುರೆ ಹಾಗೂ ಸಚಿವ ಮುನಿರತ್ನ ಸೇರಿ ಏಳು ಮಂದಿ ಹೆಸರನ್ನು ಕಲಬುರಗಿ ಮಹಾನಗರದ ಮತದಾರರ ಪಟ್ಟಿಯಲ್ಲಿ ಸೇರಿಸಿ ವಾಮಮಾರ್ಗದಿಂದ ಗದ್ದುಗೆ ಏರಲು ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದರು.

ಆಪರೇಷನ್‌ ಕಮಲದ ಮೂಲಕ ಅಧಿಕಾರಕ್ಕೆ ಬರುವುದನ್ನು ರೂಢಿ ಮಾಡಿಕೊಂಡಿರುವ ಬಿಜೆಪಿ ಕಲಬುರಗಿ ಪಾಲಿಕೆಯಲ್ಲಿ ಸ್ಥಳೀಯ ಶಾಸಕರನ್ನು ಹೊರತುಪಡಿಸಿ ಬೇರೆ ಭಾಗದ ಶಾಸಕರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಯತ್ನ ನಡೆಸಿದೆ. ಕಳೆದ ನ. 9ರಂದು ಎಲ್ಲ ಏಳು ವಿಧಾನ ಪರಿಷತ್‌ ಸದಸ್ಯರು ಕಲಬುರಗಿಯಲ್ಲೇ ಪಾಲಿಕೆ ಸದಸ್ಯರ ಮನೆಯಲ್ಲೇ ಬಾಡಿಗೆ ಇರಲಾಗಿದೆ ಎಂದು ಹೇಳಿ ಆನ್‌ಲೈನ್‌ ಮುಖಾಂತರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಅರಿತು ಬಿಜೆಪಿ ಇಂತಹ ಮಾನಗೇಡಿ ಕಾರ್ಯಕ್ಕೆ ಮುಂದಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಬೆದರಿಕೆ ಹಾಕುವ ಟಿಎಂಸಿ ನಾಯಕರ ಕೈ, ಕಾಲು ಮುರಿಯಿರಿ:ಬಿಜೆಪಿ ಶಾಸಕ

ಏಳು ಜನ ವಿಧಾನ ಪರಿಷತ್‌ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಸ್ವತಃ ಮುಖ್ಯಮಂತ್ರಿಗಳೇ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಆಯುಕ್ತರ ಮೇಲೆ ಒತ್ತಡ ಹಾಕಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡರು ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು, ಆಮಿಷಕ್ಕೊಳಗಾಗಿ ಯಾವುದೇ ವಿಚಾರಣೆ ನಡೆಸದೆ ಮತದಾರರ ಪಟ್ಟಿಯಲ್ಲಿ ಈ ಏಳು ಜನರ ಹೆಸರು ಸೇರಿಸಿದರೆ ಕಾಂಗ್ರೆಸ್‌ ಸುಮ್ಮನೇ ಕೂಡುವುದಿಲ್ಲ. ಕಾನೂನು ಹೋರಾಟದ ಜತೆಗೆ ಮುಂದೆ ಕಾಂಗ್ರೆಸ್‌ ಸರ್ಕಾರ ಬಂದಾಗ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದಲೇ ವಜಾ ಮಾಡಲಾಗುವುದು. ಸಾಧ್ಯವಾದರೆ ಜೈಲಿಗೂ ಕಳುಹಿಸಲಾಗುವುದು. ಅಧಿಕಾರಿಗಳು ಐಎಎಸ್‌ ಆಗಿರಲಿ ಇನ್ಯಾರೇ ಆಗಿರಲಿ, ಅವರನ್ನು ಬಿಡೋದಿಲ್ಲ ಎಂದು ಗುಡುಗಿದರು.

ಈಗಾಗಲೇ ಏಳು ವಿಧಾನ ಪರಿಷತ್‌ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸದಿರುವಂತೆ ಚುನಾವಣಾಧಿಕಾರಿಗಳಿಗೆ ಲಿಖೀತ ದೂರು ಸಲ್ಲಿಸಲಾಗಿದೆ. ಅಲ್ಲದೇ ಕಾನೂನು ಹೋರಾಟದ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದರು.

ಈ ಹಿಂದೆ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೇ ತೆರನಾಗಿ ವಿಧಾನ ಪರಿಷತ್‌ ಸದಸ್ಯರ ಹೆಸರು ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ನಡೆದಿದೆ. ಈ ಹಿಂದೆ ತಪ್ಪು ಮಾಡಲಾಗಿದ್ದರೆ ಈಗಲೂ ತಪ್ಪು ಮಾಡುವುದು ಯಾವ ನ್ಯಾಯ? ಡಿಸಿ, ಪಾಲಿಕೆ ಆಯುಕ್ತ ಹಾಗೂ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರು ಯಾರದ್ದೇ ಒತ್ತಡಕ್ಕೆ ಮಣಿಯದೇ ಮುಂದಿನ ದಿನಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ಮಾದರಿಯನ್ನಾಗಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಮೇಯರ್‌ ಶರಣು ಮೋದಿ, ಡಾ| ಕಿರಣ ದೇಶಮುಖ, ಪ್ರವೀಣ ಹರವಾಳ, ಈರಣ್ಣ ಝಳಕಿ, ಸಂತೋಷ ಪಾಟೀಲ ದುಧನಿ, ಸೈಯದ್‌ ಅಹ್ಮದ ಇದ್ದರು.

ಈಗಾಗಲೇ 55 ಪಾಲಿಕೆ ಸದಸ್ಯರು ಹಾಗೂ ಎಂಟು ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಆದರೆ ಈಗ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದರೆ ಅಧಿಕಾರ ದುರ್ಬಳಕೆ ಆಗುತ್ತದೆಯಲ್ಲದೇ ಕ್ರಿಮಿನಲ್‌ ದರ್ಬಾರ್‌ಗೆ ಸಾಕ್ಷಿಯಾಗುತ್ತದೆ. -ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.