ಸಿಎಂ ಬದಲಾವಣೆಯೇ ಬಿಜೆಪಿ ಸಾಧನೆ: ಪ್ರಿಯಾಂಕ್
Team Udayavani, Nov 9, 2021, 11:56 AM IST
ಚಿತ್ತಾಪುರ: ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ಹಾಗೂ ಕಲಬುರಗಿ ಎಂದರೇ ಅಲರ್ಜಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೇ ಬರೀ ಮುಖ್ಯಮಂತ್ರಿಗಳ ಬದಲಾವಣೆಯಲ್ಲಿಯೇ ಇರುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 3.66 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಅಂದರೇ ಏನೂ ಅಂತ್ತಲೇ ಗೋತ್ತಿಲ್ಲ. ಕೆಲವು ವರ್ಷಗಳ ಹಿಂದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮೂವರು ಸಿಎಂಗಳನ್ನು ನೋಡಿದ್ದೇವೆ. ಇದೀಗ ಎರಡುವರೆ ವರ್ಷದ ಅಧಿಕಾರವಧಿಯಲ್ಲಿ ಇಬ್ಬರು ಸಿಎಂಗಳನ್ನು ಬದಲಾವಣೆ ಮಾಡಿದ್ದೆ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದರು.
ಚಿತ್ತಾಪುರ ಮತಕ್ಷೇತ್ರದ ಗ್ರಾಮಗಳಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ವಾಡಿ ಪಟ್ಟಣದಲ್ಲಿ ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಎಜುಕೇಷನ್ ಹಬ್ ನಿರ್ಮಾಣವಾಗಲಿದೆ. ಮಾಡಬೂಳ ಗ್ರಾಮದ ಬಳಿ 100 ಕೋಟಿ ರೂ. ವೆಚ್ಚದಲ್ಲಿ ಪ್ರಾಣಿ ಸಂಗ್ರಹಾಲಯ ನಿರ್ಮಾಣಗೊಳ್ಳಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಅಧ್ಯಕ್ಷ ರಮೇಶ ಮರಗೋಳ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಶಂಭುಲಿಂಗ ಗುಂಡಗುರ್ತಿ, ಗುಂಡಗುರ್ತಿ ಗ್ರಾಪಂ ಮಾಜಿ ಅಧ್ಯಕ್ಷ ಸುನೀಲ್ ದೊಡ್ಮನಿ, ಮಹೇಶ ಕಂಟಿ ಬೆಳಗುಂಪಾ, ಮುಖಂಡರಾದ ಶಿವು ಸಾಹುಕಾರ, ಮಾಣಿಕ್ ಸಂಗನ್, ರವಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.