ದೇಗಲಮಡಿ ಸೇತುವೆ ರಕ್ಷಣಾಗೋಡೆ ನಿರ್ಮಿಸಿ
Team Udayavani, Dec 4, 2021, 12:18 PM IST
ಚಿಂಚೋಳಿ: ತಾಲೂಕಿನ ದೇಗಲಮಡಿ ಗ್ರಾಮದ ಹತ್ತಿರ ಹರಿಯುವ ಸಣ್ಣ ನದಿಗೆ ನಿರ್ಮಿಸಿದ ಸೇತುವೆಗೆ ರಕ್ಷಣಾಗೋಡೆ ಕಟ್ಟಲು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಸ್ತಾನ್ ಪಟೇಲ ಕೋಡ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗಲಮಡಿ ಗ್ರಾಮದ ಕೂಡು ರಸ್ತೆಗೆ ಅನೇಕ ವರ್ಷಗಳ ಹಿಂದೆ ಕೆಳಮಟ್ಟದ ಸೇತುವೆ ನಿರ್ಮಿಸಲಾಗಿದೆ. ಆದರೆ ಎರಡು ಬದಿಗಳಲ್ಲಿ ರಕ್ಷಣಾಗೋಡೆ ನಿರ್ಮಿಸದೇ ಇರುವುದರಿಂದ ಮಳೆಗಾಲದಲ್ಲಿ ತುಂಬಿ ಹರಿಯುವ ನಾಲೆ ದಾಟಲು ಜನತೆ ಭಯಪಡುವಂತೆ ಆಗಿದೆ ಎಂದು ಹೇಳಿದರು.
ರಾತ್ರಿ ಸಮಯದಲ್ಲಿ ಸೇತುವೆ ಕಾಣದೇ ಇರುವುದರಿಂದ ದನಕರುಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಅಲ್ಲದೇ ದ್ವಿಚಕ್ರ ವಾಹನ ಸವಾರರು ಸೇತುವೆ ಮೇಲೆ ಸಂಚರಿಸುವಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಆದ್ದರಿಂದ ಈ ಸೇತುವೆಗೆ ರಕ್ಷಣಾಗೋಡೆ ನಿರ್ಮಿಸಿಕೊಡಿ ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ ಅವರಿಗೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೇಗಲಮಡಿ ಗ್ರಾಮದೊಳಗೆ ಸರಕು ತುಂಬಿದ ಭಾರವಾದ ಲಾರಿ, ಆಟೋ, ಜೀಪು, ಬಸ್ ಗಳು ಆಗಮಿಸಲು ತೊಂದರೆ ಪಡುವಂತೆ ಆಗಿದೆ. ಆದ್ದರಿಂದ ಶಾಸಕರು ಕೂಡಲೇ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.