ಕಾರ್ಮಿಕರ ಕಲ್ಯಾಣ ಯೋಜನೆಗಳ ಐಕೋನಿಕ್ ವೀಕ್ ಪ್ರಚಾರಕ್ಕೆ ಚಾಲನೆ
Team Udayavani, Mar 15, 2022, 12:16 PM IST
ಕಲಬುರಗಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳ ಕುರಿತು ಕಾರ್ಮಿಕ ವರ್ಗದಲ್ಲಿ ಜನಜಾಗೃತಿ ಮೂಡಿಸುವ ಐಕೋನಿಕ್ ವೀಕ್ ಪ್ರಚಾರ ಅಭಿಯಾನಕ್ಕೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೋಮವಾರ ಚಾಲನೆ ನೀಡಿದರು.
ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಮಿಕ ವರ್ಗ ಹೆಚ್ಚಾಗಿರುವ ಕಾರ್ಖಾನೆಗೆ ಹೋಗಿ ಕ್ಯಾಂಪ್ ಆಯೋಜಿಸುವ ಮೂಲಕ ಹೆಚ್ಚಿನ ಜನಜಾಗೃತಿ ಮೂಡಿಸಬೇಕೆಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾಗುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ವೈದ್ಯಕೀಯ ಸಹಾಯಧನ, ವಸತಿ ಸೌಲಭ್ಯ, ಮದುವೆ ಸಹಾಯಧನ, ಹೆರಿಗೆ ಸೌಲಭ್ಯ, ತಾಯಿ ಮಗು ಸಹಾಯಹಸ್ತ, ಶೈಕ್ಷಣಿಕ ಸಹಾಯಧನ, ಶಿಶುಪಾಲನಾ ಭತ್ಯೆ, ಕಾರ್ಮಿಕ ಸಂಜೀವಿನಿ ಹಾಗೂ ಶಿಕ್ಷಣ ತರಬೇತಿ ಕುರಿತು ಈ ವಾಹನ ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾದ್ಯಂತ ಸಂಚರಿಸಿ ಅರಿವು ಮೂಡಿಸಲಿದೆ ಎಂದರು.
ಡಿ.ಜಿ. ನಾಗೇಶ, ಅವಿನಾಶ ನಾಯಕ್, ಸಂತೋಷ ಕುಲಕರ್ಣಿ ಇದ್ದರು. ಇದೇ ಸಂದರ್ಭದಲ್ಲಿ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.