ಕೇಂದ್ರದ ಸಾಧನೆ ಮನೆ-ಮನೆಗೆ ತಲುಪಿಸಿ: ಜಾಧವ್
Team Udayavani, Nov 16, 2021, 1:27 PM IST
ಸುರಪುರ: ಕೇಂದ್ರ ಸರಕಾರಿಂದ ಒಳ್ಳೆಯ ಕಾರ್ಯಕ್ರಮಗಳು ಇಂದು ಸಿಗುತ್ತಿವೆ. ಆತ್ಮ ನಿರ್ಭರ ಪ್ರಧಾನಿ ನರೇಂದ್ರ ಮೋದಿಜೀಯವರ ಮಹತ್ವಕಾಂಕ್ಷಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆ ಮತ್ತು ಸಾಧನೆಗಳನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಜನರ ಮನೆ-ಮನೆಗೆ ಹೋಗಿ ತಿಳಿಸಬೇಕು ಎಂದು ಸಂಸದ ಡಾ| ಉಮೇಶ ಜಾಧವ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿ, ಕೊರೊನಾದಲ್ಲಿ ಪ್ರತಿಯೊಬ್ಬ ಕಾರ್ಮಿಕ ಮತ್ತು ರೈತರ ಖಾತೆಗೆ ಹಣ ಹಾಕಿ ನೆರವು ನೀಡಿದೆ ರೈತಪರ ಕಾಳಜಿಯೊಂದಿಗೆ ಎಲ್ಲ ಜಾತಿ, ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗುವ ಏಕೈಕ ಪಕ್ಷವಾಗಿದೆ. ಕೊರೊನಾ ಸಂದರ್ಭದಲ್ಲಿ ಶಾಸಕ ರಾಜುಗೌಡ ವಿವಿಧ ರಾಜ್ಯ ಮತ್ತು ನಗರ ಪ್ರದೇಶಗಳಲ್ಲಿದ್ದ ಕಾರ್ಮಿಕರಿಗೆ ವೈಯಕ್ತಿಕವಾಗಿ ಬಸ್ ಮಾಡಿ ಊರಿಗೆ ಕರೆ ತಂದಿದ್ದಾರೆ. ಇದನ್ನು ಮರೆಯಲು ಸಾಧ್ಯವಿಲ್ಲ. ಇದು ಮಾನವೀಯತೆ ಮತ್ತು ಪುಣ್ಯದ ಕೆಲಸವಾಗಿದೆ ಎಂದರು.
ಶಾಸಕ ರಾಜೂಗೌಡ ಮಾತನಾಡಿ, ಪಕ್ಷದ ಸಂಘಟನೆ ಜವಾಬ್ದಾರಿ ಪದಾಧಿಕಾರಿಗಳಿಗೆ ನೀಡಲಾಗಿದೆ. ಜನರೊಂದಿಗೆ ಬೆರತು ಪಕ್ಷವನ್ನು ಭೂತಮಟ್ಟದಲ್ಲಿ ಸದೃಢಗೊಳಿಸಬೇಕು. ಕೋವಿಡ್‌ದಲ್ಲಿ ಸಂಘ ಪರಿವಾರದವರು ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದಾರೆ. ಅವರನ್ನು ದೂರುವ ಕಾಂಗ್ರೆಸ್‌ಗರೆ ನಿಮ್ಮ ಕೊಡುಗೆ ಏನು? ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವು ದೇ ನಿಮ್ಮ ಕಾಯಕ. ಬಿಟ್ ಕಾಯಿನ್‌ನಲ್ಲೂ ಅದನ್ನೇ ಮಾಡುತ್ತಿದೆ. ಟೀಕಿಸುವುದು ಬಿಟ್ಟು ಸಾಧನೆ ಮಾಡಿಲ್ಲ ಎಂದು ದೂರಿದರು.
ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ, ದೇವೇಂದ್ರ ನಾಧ್, ರಾಜಾ ಹನುಮಪ್ಪ ನಾಯಕ ತಾತಾ, ಮೇಲಪ್ಪ ಗುಳಗಿ, ವೇಣುಗೋಪಾಲ ಜೇವರ್ಗಿ, ವೇಣುಮಾಧವನಾಯಕ, ಅಮರಣ್ಣ ಹುಡೇದ್, ಬಿಜೆಪಿ ಉಸ್ತುವಾರಿ ಅರುಣಕುಮಾರ ಬಿನ್ನಾಡಿ ಗುರು ಕಾಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.