ಖಾತ್ರಿ ಸಾಧನೆಯಲ್ಲಿ ಚಿಂಚೋಳಿ ಪ್ರಥಮ: ರಾಠೊಡ
Team Udayavani, May 1, 2022, 2:04 PM IST
ಚಿಂಚೋಳಿ: 2021-22ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತಾಲೂಕು ಜಿಲ್ಲೆಯಲ್ಲೇ ಅತಿ ಹೆಚ್ಚು ಮಾನವ ಉದ್ಯೋಗ ದಿನಗಳನ್ನು ಸೃಜನ ಮಾಡುವುದರ ಮೂಲಕ ಉತ್ತಮ ಸಾಧನೆ ಮಾಡಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿಲಕುಮಾರ ರಾಠೊಡ ತಿಳಿಸಿದರು.
ತಾಪಂ ಸಭಾಂಗಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2021-22ನೇ ಸಾಲಿನಲ್ಲಿ 10,15,321 ಮಾನವ ದಿನಗಳ ಸೃಜನೆಯ ಗುರಿ ನಿಗದಿಪಡಿಸಲಾಗಿತ್ತು. ಗುರಿ ಸಾಧನೆಗಾಗಿ ಉದ್ಯೋಗ ಖಾತ್ರಿ ಕೆಲಸಗಳನ್ನು ಕಾರ್ಯಾರಂಭ ಮಾಡಿ, ಎಲ್ಲ ಗ್ರಾಮ ಪಂಚಾಯಿತಿ ಸಿಬ್ಬಂದಿ ತಾಲೂಕಿನಲ್ಲಿ ಕಳೆದ ಮಾರ್ಚ್ 31ರ ಅಂತ್ಯಕ್ಕೆ ಒಟ್ಟು 12,57,907 ಮಾನವ ದಿನಗಳನ್ನು ಸೃಜನ ಮಾಡಿದ್ದಾರೆ. ಈ ಮೂಲಕ ಶೇ. 123.89ರಷ್ಟು ಗುರಿ ಸಾಧನೆಯೊಂದಿಗೆ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದು ಹೇಳಿದರು.
ಪ್ರಸ್ತುತ 2022-23ನೇ ಸಾಲಿನ ಹಣಕಾಸು ವರ್ಷ ಪ್ರಾರಂಭವಾಗಿದೆ. ಕಳೆದ ವರ್ಷದ ಗುರಿ ಸಾಧನೆಯಂತೆ ಈ ವರ್ಷವೂ ಉತ್ತಮ ಪ್ರಗತಿ ಸಾಧಿಸಲು 10,42,093 ಮಾನವ ದಿನಗಳ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿ ಪಿಡಿಒ, ಇತರೆ ಸಿಬ್ಬಂದಿಗೆ ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಕೆಲಸ ಪ್ರಾರಂಭಿಸಲಗಿದೆ ಎಂದು ವಿವರಿಸಿದರು.
ತಾಲೂಕಿನ ಕುಂಚಾವರಂ ಗ್ರಾಪಂ ಅತಿ ಹೆಚ್ಚು 950, ಚಿಮ್ಮನಚೋಡ ಗ್ರಾಪಂ 512 ಕೂಲಿಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು ಹೆಚ್ಚಿನ ಕೂಲಿಕಾರರಿಗೆ ಕೆಲಸಕ್ಕೆ ಬರುವಂತೆ ಪ್ರೇರೇಪಿಸಲು ಎಲ್ಲ ಗ್ರಾಪಂಗಳಲ್ಲಿಯೂ “ದುಡಿಯೋಣ ಬಾರಾ’ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಕೂಲಿಕಾರ್ಮಿಕರು ಕೆಲಸ ಬಯಸಿ ನಗರ ಪ್ರದೇಶಗಳಿಗೆ ವಲಸೆ ಹೋಗದೇ, ಸ್ಥಳೀಯವಾಗಿ ತಮ್ಮ ಗ್ರಾಮಗಳಲ್ಲಿಯೇ ಕೆಲಸ ನಿರ್ವಹಿಸಿ ನರೇಗಾ ಯೋಜನೆ ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು. ಪಿಡಿಒ ವಾಲಿ ಬಕ್ಕಪ್ಪ, ಸಂಜೀವಕುಮಾರ ಕಳಸ್ಕರ, ಭೀಮಸೇನ, ರಮೇಶ ದೇಗಲಮಡಿ ಮತ್ತಿತರರು ಇದ್ದರು.
ಪ್ರಸ್ತುತ ಸಾಲಿನ ಕ್ರಿಯಾ ಯೋಜನೆಯನ್ನು ಜಲ ಸಂರಕ್ಷಣೆ ಕಾಮಗಾರಿ (ಅಂತರ್ಜಲ ಚೇತನ), ಅರಣ್ಯ ಇಲಾಖೆ, ಪ್ರಾಕೃತಿಕ ಸಂಪನ್ಮೂಲ ಕಾಮಗಾರಿಗಳು ಶೇ. 65, ರಸ್ತೆ ಕಾಮಗಾರಿಗಳು ಶೇ.10, ಇತರೆ ಶೇ. 25 ಕಾಮಗಾರಿಗಳು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಭರದಿಂದ ನಡೆಯುತ್ತಿವೆ. ಎನ್.ಎಂ.ಎಂ.ಎಸ್ ಆ್ಯಪ್ ಮೂಲಕ ಕಡ್ಡಾಯವಾಗಿ ಹಾಜರಾತಿ ತೆಗೆದುಕೊಳ್ಳಲಾಗುತ್ತಿದೆ. ಪ್ರಾರಂಭದಲ್ಲಿ ಕೆಲವು ಗ್ರಾಪಂಗಳಲ್ಲಿ ಸರ್ವರ್, ನೆಟವರ್ಕ್ ಸಮಸ್ಯೆಗಳು ಕಂಡು ಬಂದಿದ್ದು, ಎಲ್ಲ ಗ್ರಾಪಂಗಳಿಗೆ ನೋಡಲ್ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ. -ಅನಿಲಕುಮಾರ ರಾಠೊಡ, ಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.