ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ
Team Udayavani, Jul 10, 2020, 10:52 AM IST
ಚಿಂಚೋಳಿ: ದಲಿತ ಸಂಘರ್ಷ ಸಮಿತಿ ಮುಖಂಡರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಚಿಂಚೋಳಿ: ಡಾ| ಬಿ.ಆರ್. ಅಂಬೇಡ್ಕರವರು ವಾಸಿಸುತ್ತಿದ್ದ ನಿವಾಸವನ್ನು ಧ್ವಂಸಗೊಸಿರುವ ಕಿಡಿಗೇಡಿಗಳನ್ನು ಬಂಧಿಸಿ ಅವರನ್ನು ಗಡಿಪಾರು ಮಾಡಿ ಸೂಕ್ತ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಿ ತಾಲೂಕು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.
ದಲಿತ ಮುಖಂಡರು ಮಾತನಾಡಿ, ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾಗಿದ್ದ ಭಾರತದ ಕೋಟ್ಯಂತರ ಶೋಷಿತರಿಗೆ ಬೆಳಕನ್ನು ನೀಡಿದ್ದ ಅಂಬೇಡ್ಕರ್ ಅವರು ವಾಸಿಸುತ್ತಿದ್ದ ಮನೆಯ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು ಅವರಣದಲ್ಲಿ ಇರುವ ಸಾಮಾನುಗಳನ್ನು ಒಡೆದು ಹಾಕುವುದರ ಮೂಲಕ ಅವರ ವಿಕೃತ ಮನಃಸ್ಥಿತಿ ತೋರಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ದುಷ್ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಕೊಂಡು ಗಡಿಪಾರು ಮಾಡಬೇಕು. ಮುಂದೆ ಇಂತಹ ಹೀನ ಕೃತ್ಯ ನಡೆಯದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ವಿಭಾಗೀಯ ಸಂಚಾಲಕ ಗೋಪಾಲ ರಾಂಪೂರೆ, ತಾಲೂಕಾಧ್ಯಕ್ಷ ಶಶಿಕುಮಾರ ಮೇತ್ರಿ, ಸೋಮಶೇಖರ ಬೆಡಕಪಳ್ಳಿ, ಬಾಬುರಾವ್ ಬುಗಡಿ, ಶ್ರೀನಿವಾಸ ಕರಚಖೇಡ, ರಾಜು, ವಿಶಾಲ ಕಾನಿಸಿ, ಹಣಮಂತ ಕುಡಹಳ್ಳಿ, ಭೀಮಶಂಕರ ರಾಯಕೊಡ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.