Chincholi: ಸಾಲದ ಹೊರೆ ತಾಳಲಾರದೇ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ
Team Udayavani, Nov 9, 2024, 1:06 PM IST
ಚಿಂಚೊಳಿ: ಸಾಲದ ಹೊರೆ ತಾಳಲಾರದೇ ಕೀಟನಾಶಕ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.
ನರನಾಳ ಗ್ರಾಮದ ನಿವಾಸಿ ನಾಗಪ್ಪ ಹಣಮಂತ (38) ಮೃತಪಟ್ಟ ರೈತ.
ನಾಗಪ್ಪ ಹಣಮಂತ ಸಾಲದ ಹೊರೆ ತಾಳಲಾರದೇ ಕೀಟನಾಶಕ ಸೇವಿಸಿದ್ದು, ಬಳಿಕ ಆತನನ್ನು ಕಲಬುರಗಿ ಜಿಲ್ಲೆಯ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಮಳೆಯಿಂದಾಗಿ ಹೊಲದಲ್ಲಿ ತೊಗರಿ ಬೆಳೆದು ನಿಂತ ಬೆಳೆ ಹಾನಿಯಾಗಿತ್ತು. ಹಾಗಾಗಿ ಮನನೊಂದು ರೈತ ಖಾಸಗಿ ಸಾಲದಿಂದ ಹೊಲದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಪತ್ನಿ ಶ್ರಿದೇವಿ ನರನಾಳ ಅವರು ಚಿಂಚೋಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತ ನಾಗಪ್ಪ ಅವರು 8 ವರ್ಷದ ಒಂದು ಹೆಣ್ಣು ಮಗು ಹಾಗೂ 3 ವರ್ಷದ ಗಂಡು ಮಗುವನ್ನು ಅಗಲಿದ್ದಾರೆ. ಖಾಸಗಿ 2 ಲಕ್ಷ ರೂ. ಸಾಲ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Brahmavara: ಲಾಕ್‌ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.