Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Team Udayavani, Sep 25, 2024, 3:02 PM IST
ಚಿತ್ತಾಪುರ: ತಾಲೂಕಿನಲ್ಲಿ ಸೆ.24ರ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ದಿಗ್ಗಾಂವ ಗ್ರಾಮದ ಹಳ್ಳದ ನೀರು 110 ರಿಂದ 120 ಮನೆಯೊಳಗೆ ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಮನೆಗಳಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿದ್ದು, ಸರ್ಕಾರದ ವತಿಯಿಂದ ಸಿಗಬೇಕಾದ ಪರಿಹಾರ ಒದಗಿಸಿ ಕೊಡಲಾಗುವುದು. ದಿಗ್ಗಾಂವ ಗ್ರಾಮದಲ್ಲಿ ರಾತ್ರಿ ಸುರಿದ ಮಳೆ ದಾಖಲೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಹರಳಯ್ಯ ಬಡಿಗೇರ್, ಸಿದ್ದಣ್ಣಗೌಡ ಆರ್.ಡಿ, ಶ್ರೀಮಂತ ಗುತ್ತೇದಾರ, ಶರಣು ಸೇರಿದಂತೆ ಇತರರು ಇದ್ದರು.
ಅದೇ ರೀತಿ ಇಟಗಾ ಗ್ರಾಮದ ಸಮೀಪದ ಓರಿಯಂಟ್ ಸಿಮೆಂಟ್ ಕಂಪೆನಿಯ ಮಶೀನರಿಗಳಲ್ಲಿ, ಕಚೇರಿ ಹಾಗೂ ಆವರಣದಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯುಂಟಾಗಿರುವ ಮಾಹಿತಿ ತಿಳಿದು ಬಂದಿದೆ.
ಬೆಳೆ ಸಂಪೂರ್ಣ ಹಾನಿ:
ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ವಿವಿಧೆಡೆ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ದಂಡೋತಿ, ಭಾಗೋಡಿ, ಮುಡಬೂಳ, ಮರಗೋಳ, ದಿಗ್ಗಾಂವ ಸೇರಿದಂತೆ ವಿವಿಧ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನುಗ್ಗಿ ತೊಗರಿ ಬೆಳೆ ಹಾನಿಯಾಗಿದೆ.
ಮಳೆ ವಿವರ: ಚಿತ್ತಾಪುರ ಪಟ್ಟಣದಲ್ಲಿ 53.6 ಮಿ.ಮೀ, ಗುಂಡಗುರ್ತಿ ವಲಯದಲ್ಲಿ 0.0 ಮಿ.ಮೀ, ನಾಲವಾರ ವಲಯದಲ್ಲಿ 20.2 ಮಿ.ಮೀ, ಅಳ್ಳೋಳ್ಳಿ ವಲಯದಲ್ಲಿ 20.2 ಮಿ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.