Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ
Team Udayavani, Oct 15, 2024, 8:09 PM IST
ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಅ.15ರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ವೈದ್ಯರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಂದು ರೋಗಿಗಳ ಆರೋಗ್ಯ ವಿಚಾರಿಸಬೇಕು. ಸರ್ಕಾರಿ ಆಸ್ಪತ್ರೆಗೆ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಂತರ ಆಸ್ಪತ್ರೆಯ ಪ್ರತಿಯೊಂದು ಕೋಣೆಗಳನ್ನು ವೀಕ್ಷಿಸಿದರು. ಬಾಣಂತಿಯರ ಕೋಣೆಗೆ ಹೋಗಿ ಅವರ ಜೊತೆ ಕೆಲ ಕಾಲ ಕಳೆದು ಅವರ ಆರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಸಿಇಓ ಭಂವ್ಹಾರಸಿಂಗ್ ಮೀನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿಎಚ್.ಓ ಡಾ. ಶರಣು ಕದ್ನಾಳ, ಸಿಡಿಪಿಓ ಆರತಿ ತುಪ್ಪದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಜೀವುಲ್ಲಾ ಖಾದ್ರಿ, ತಾಲೂಕು ಆಡಳಿತಾಧಿಕಾರಿ ಡಾ. ಮುಬಾಶೀರ್, ವೈದ್ಯರಾದ, ಶ್ರೀಧರ ಲಾಕೆ, ಡಾ. ಖಾಜೀಂ ಅಲಿ, ಡಾ.ಪ್ರೇರಣಾ, ಡಾ. ಮಾಧುರಿ, ಡಾ. ನಸರುನ್ನಿಸಾ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
San Francisco; ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ
Udupi: ಹಿರಿಯ ಮಾತೆ ಭಾಗ್ಯ ಸತ್ಯನಾರಾಯಣ್‌ಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.