ನನೆಗುದಿಗೆ ಬಿದ್ದ ಕನ್ನಡ ಭವನಕ್ಕೆ ನಿರ್ದೇಶಕರ ಭೇಟಿ
ಜಿಲ್ಲಾಧಿಕಾರಿ ಖಾತೆಯಲ್ಲಿದೆ 45 ಲಕ್ಷ ರೂ. ಬೆಂಗಳೂರಿನ ನಿರ್ದೇಶಕರಿಗೆ ಡಿಸಿ ಪತ್ರ
Team Udayavani, Jun 12, 2020, 10:52 AM IST
ಚಿತ್ತಾಪುರ: ನನೆಗುದಿಗೆ ಬಿದ್ದಿರುವ ಕನ್ನಡ ಭವನ ಕಾಮಗಾರಿ ಸ್ಥಳಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಭೇಟಿ ನೀಡಿ ಪರಿಶೀಲಿಸಿದರು.
ಚಿತ್ತಾಪುರ: ಪಟ್ಟಣದಲ್ಲಿ ನನೆಗುದಿಗೆ ಬಿದ್ದಿರುವ ಕನ್ನಡ ಭವನ ಕಾಮಗಾರಿ ಸ್ಥಳಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿದರು.
ಕಳೆದ 2013-14ನೇ ಸಾಲಿನಲ್ಲಿ ಮಂಜೂರಿಯಾಗಿದ್ದ ಕನ್ನಡ ಭವನ ಕಾಮಗಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಮತ್ತು 2016-17ನೇ ಸಾಲಿನಲ್ಲಿ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪಟ್ಟಣದಲ್ಲಿ ಕನ್ನಡ ಭವನಕ್ಕೆ 2013-14ನೇ ಸಾಲಿನಲ್ಲಿ 20 ಲಕ್ಷ ರೂ. ಮಂಜೂರಾಗಿದೆ. ಈ ಭವನ ಬೇಸಮೆಂಟ್ ಹಂತ ದವರೆಗೂ ಬಂದಿದೆ. ಕಾಮಗಾರಿ ಅಪೂರ್ಣವಾಗಿದ್ದರಿಂದ ಪಟ್ಟಣ ದಲ್ಲಿ ಪ್ರತೇಕ ಕನ್ನಡ ಭವನದ ಅವಶ್ಯಕತೆಯಿಲ್ಲ. ಹೀಗಾಗಿ ಅಪೂರ್ಣವಾದ ಕಾಮಗಾರಿ ಪೂರ್ಣಗೊಳಿಸಲು ಕೆಆರ್‌ಐಡಿಎಲ್‌ಗೆ ಅನುದಾನ ಬಿಡುಗಡೆ ಮಾಡಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಕಳೆದ 8 ಜುಲೈ 2019ರಂದು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಆದರೆ ಇಲ್ಲಿವರೆಗೆ ಅದಕ್ಕೆ ಉತ್ತರ ಬಂದಿಲ್ಲ ಎಂದು ತಿಳಿಸಿದರು.
ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಮಂಜೂರಿಯಾದ 45 ಲಕ್ಷ ರೂ.ಗಳನ್ನು ಈಗಾಗಲೇ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಕನ್ನಡ ಭವನಕ್ಕೆ ಬಳಸಿಕೊಳ್ಳಲು ಆದೇಶ ನೀಡಲು ಕೋರಿ ಪತ್ರ ಬರೆಯಲಾಗಿದೆ. ಪ್ರಸ್ತುತ ಬೆಂಗಳೂರಿನ ನಿರ್ದೇಶಕರ ಹಂತದಲ್ಲಿದೆ. ಈ ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಬೆಂಗಳೂರಿನ ನಿರ್ದೇಶಕರನ್ನು ಭೇಟಿ ನೀಡಿ ವಿಷಯ ಗಮನಕ್ಕೆ ತರಲಾಗುವುದು ಎಂದರು.
ಮೊದಲು ಅನುದಾನ ಮತ್ತು ಭವನದ ದಾಖಲೆ ಪತ್ರಗಳ ಕೊರತೆ ಇತ್ತು. ಈಗ ಎಲ್ಲವೂ ಸರಿಹೋಗಿದೆ. ಈಗಾಗಲೇ ಭವನ ನಿರ್ಮಾಣಕ್ಕೆ ಬಿಡುಗಡೆಯಾದ 45 ಲಕ್ಷ ರೂ. ಅನುದಾನ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಆದ್ದರಿಂದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಕನ್ನಡ ಭವನದ ಕನಸು ಈಡೇರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಆಗ್ರಹಿಸಿದರು. ನಿಕಟಪೂರ್ವ ಅಧ್ಯಕ್ಷ ನಾಗಯ್ಯಸ್ವಾಮಿ ಅಲ್ಲೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.