ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ
Team Udayavani, Jun 20, 2020, 11:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ತಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸುವುದರ ಜತೆಗೆ ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು.
ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಹೀಗಾಗಿ ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಡವಳಗಿ ಮಾತನಾಡಿ, ಚಿತ್ತಾಪುರ, ಕಾಳಗಿ, ಶಹಾಬಾದ, ವಾಡಿ, ಅಳ್ಳೋಳ್ಳಿ ಸೇರಿ ತಾಲೂಕಿನಲ್ಲಿ 25 ಪರೀಕ್ಷಾ ಕೇಂದ್ರಗಳನ್ನಾಗಿ ಸ್ಥಾಪಿಸಲಾಗಿದೆ. ಅದರಲ್ಲಿ 5,626 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕೋಣೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಊಟ, ನೀರು ತರಬೇಕು ಎಂದು ಹೇಳಿದರು.
ಶಾಸಕ ಪ್ರಿಯಾಂಕ್ ಖರ್ಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 6 ಸಾವಿರ ಮಾಸ್ಕ್ಗಳನ್ನು ನೀಡಲಿದ್ದಾರೆ. ಸ್ಕೌಟ್ಸ್ ಮತ್ತು ಗೌಡ್ಸ್ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ 6 ಸಾವಿರ ಮಾಸ್ಕ್ಗಳನ್ನು ನೀಡಲಿದ್ದಾರೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಾರಿಗೆ ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಶಹಾಬಾದ ತಹಶೀಲ್ದಾರ್ ಸುರೇಶ ವರ್ಮಾ, ಕಾಳಗಿ ತಹಶೀಲ್ದಾರ್ ನೀಲಪ್ರಭಾ, ಸಿಪಿಐ ಪಂಚಾಕ್ಷರಿ ಸಾಲಿಮಠ, ಬಸ್ ಘಟಕ ವ್ಯವಸ್ಥಾಪಕ ವಿಠ್ಠಲ್ ರಾವ್ ಕದಂ, ಶಹಾಬಾದ ತಾಪಂ ಇಒ ಲಕ್ಷ್ಮಣ ಶೃಂಗೇರಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ನೋಡಲ್ ಅಧಿಕಾರಿ ಸಾವಿತ್ರಿ ಪಾಟೀಲ್ ಮಾತನಾಡಿದರು. ಚಿತ್ತಾಪುರ ತಾಪಂ ಇಒ ಡಾ.ಬಸಲಿಂಗಪ್ಪ ಡಿಗ್ಗಿ, ಸಿಪಿಐಗಳಾದ ಭೋಜರಾಜ ರಾಠೊಡ, ಅಮರೇಶ್ವರ್, ಬಿಆರ್‌ಸಿ ಮಲ್ಲಿಕಾರ್ಜುನ ಸೇಡಂ, ದೇವೇಂದ್ರರೆಡ್ಡಿ ದುಗನೂರ, ಸಂತೋಷ ಶಿರನಾಳ ಇದ್ದರು.
ಅಶ್ವಿನಿ ಅಗ್ನಿಹೋತ್ರಿ ಪ್ರಾರ್ಥನೆ ಗೀತೆ ಹಾಡಿದರು. ಪರೀಕ್ಷಾ ನೋಡಲ್ ಅಧಿಕಾರಿ ವೆಂಕಟ್‌ರೆಡ್ಡಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಶರಣಪ್ಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.