ಪುರಸಭೆಯಿಂದ ಅಂಗಡಿಗಳ ಆಂಗ್ಲ ನಾಮಫಲಕ ತೆರವು
Team Udayavani, Jun 18, 2022, 1:26 PM IST
ಆಳಂದ: ಪಟ್ಟಣದಲ್ಲಿ ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ ನೇತೃತ್ವದಲ್ಲಿ ಸಿಬ್ಬಂದಿ ಒಳಗೊಂಡ ತಂಡ ಹೋಟೆಲ್, ಅಂಗಡಿಗಳ ಮೇಲೆ ಶುಕ್ರವಾರ ಹಠಾತ್ ದಾಳಿ ನಡೆಸಿದರು.
ಬಸ್ ನಿಲ್ದಾಣ ಮುಂಭಾಗದ ಮುಖ್ಯರಸ್ತೆಯಲ್ಲಿನ ಅಂಗಡಿಗಳ ಮೇಲೆ ಕನ್ನಡ ಫಲಕವಿಲ್ಲದೇ ಆಂಗ್ಲಫಲಕ ಹಾಕಿರುವುದನ್ನು ತೆರವುಗೊಳಿಸಿದರು. ಅಲ್ಲದೇ, ಸ್ಥಳದಲ್ಲೇ ಹಾಜರಿದ್ದ ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್ ಮೂಲಕ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದರು.
ಪಟ್ಟಣದ ಬಸ್ ನಿಲ್ದಾಣದ ಹೋಟೆಲ್‌ಗೆ ಲಗ್ಗೆ ಹಾಕಿದ್ದ ಮುಖ್ಯಾಧಿಕಾರಿಗಳ ತಂಡ ಕೈ ತೊಳೆಯುವ ಜಾಗದಲ್ಲಿ ಅಸ್ವತ್ಛತೆ, ಸಾಬೂನಿಲ್ಲದೆ ಇರುವುದು, ಕುಡಿಯಲು ನೀರಿನ ಅವ್ಯವಸ್ಥೆ, ಅಡುಗೆ ಕೋಣೆಯಲ್ಲಿ ಹೊಲಸು ಇದ್ದಿದ್ದನ್ನು ಕಂಡು ಸಿಡಿಮಿಡಿಗೊಂಡು, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮಾಲೀಕರಿಗೆ ಎಚ್ಚರಿಸಿದರು. ಈ ಹೋಟೆಲ್‌ಗಳಲ್ಲಿ ವಾಣಿಜ್ಯ ಗ್ಯಾಸ್ ಬಳಸುವ ಬದಲು ಗೃಹ ಬಳಕೆ ಗ್ಯಾಸ್‌ಯಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದರು.
ಪಟ್ಟಣದ ಎಲ್ಲ ಅಂಗಡಿ, ಸಂಘ, ಸಂಸ್ಥೆಯ ಫಲಕಗಳನ್ನು ಕನ್ನಡಕ್ಕೆ ಆದ್ಯತೆ ನೀಡದೇ ಬರೀ ಆಂಗ್ಲದಲ್ಲೇ ಹಾಕಿದ್ದರೆ ಅಂಥ ಎಲ್ಲ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ, ಕಡ್ಡಾಯವಾಗಿ ಕನ್ನಡ ನಾಮಫಲಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು. ಅಕ್ರವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ಗ್ಲಾಸ್, ಚೀಲಗಳನ್ನು ಜಪ್ತಿಮಾಡಿದರು. ಆನಂತರ ವಾರಗಟ್ಟಲೆ ನಿರಂತರವಾಗಿ ಈ ಕಾರ್ಯಾಚರಣೆ ನಡೆಸಬೇಕು ಎಂದು ಸಿಬ್ಬಂದಿಗಳಿಗೆ ವಿಜಯ ಮಹಾಂತೇಶ ಸೂಚಿಸಿದರು. ಪುರಸಭೆ ವ್ಯವಸ್ಥಾಪಕ ಶಂಭುಲಿಂಗ ಕನ್ನೆ, ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್, ಎಸ್‌ಐ ರಾಘವೇಂದ್ರ, ಸಿಬ್ಬಂದಿ ಮೋಸಿನ್ ಹಾಗೂ ಇನ್ನಿತರರು ಹಾಜರಿದ್ದರು.
ಸಾರ್ವಜನಿಕರು ತಮ್ಮ ಅಂಗಡಿ ಮುಂಗಟ್ಟುಗಳ ಮೇಲೆ ಹಾಕುವ ನಾಮಫಲಕಗಳಲ್ಲಿ ಮೊದಲು ಕನ್ನಡವಿರಬೇಕು. ಆಂಗ್ಲ ಫಲಕ ಹಾಕಿದವರಿಗೆ ನೋಟಿಸ್ ಜಾರಿಗೊಳಿಸಲಾಗುತ್ತದೆ. ಇದಕ್ಕೆ ಜಗ್ಗದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ನೆರೆ, ಹೊರೆಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು. ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು. -ವಿಜಯ ಮಹಾಂತೇಶ ಹೂಗಾರ, ಮುಖ್ಯಾಧಿಕಾರಿ, ಪುರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.