ಬಸವೇಶ್ವರ ಭಾವಚಿತ್ರಕ್ಕೆ ಅಪಮಾನಕ್ಕೆ ಖಂಡನೆ
Team Udayavani, Dec 23, 2021, 12:32 PM IST
ಚಿಂಚೋಳಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ವೃತ್ತದಲ್ಲಿನ ಮಹಾತ್ಮ ಬಸವೇಶ್ವರ ಭಾವಚಿತ್ರಕ್ಕೆ ಸಗಣಿ ಬಳಿದು ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ವೀರಶೈವ ಲಿಂಗಾಯಿತ ಸಮಾಜದವರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಚಿತ್ರಶೇಖರ ಪಾಟೀಲ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ದೇಶದ್ರೋಹಿಗಳ ಅಟ್ಟಹಾಸ ಮಿತಿ ಮೀರಿದೆ. ಆದ್ದರಿಂದ ರಾಜ್ಯದಲ್ಲಿ ಎಂಇಎಸ್, ಶಿವಸೇನೆ ಸಂಘಟನೆಗಳನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಯುವ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಹಲಸಿ ಗ್ರಾಮದ ಘಟನೆ ಖಂಡನೀಯವಾಗಿದೆ ಎಂದರು. ಮುಖಂಡರಾದ ಶರಣು ಮೋತಕಪಳ್ಳಿ, ನಾಗರಾಜ ಸೀಳಿನ, ನಾಗರಾಜ ಮಲಕೂಡ, ಸಂಪತ್ ಕುಮಾರ ಮುಸ್ತಾರಿ, ಜಗ್ಗು ಗಿರಣಿ, ಕಾಶಿನಾಥ ಪಾಟೀಲ ಎಂಪಳ್ಳಿ, ವಿರೂಪಾಕ್ಷ ಎಂಪಳ್ಳಿ, ಎಪಿಎಂಸಿ ಅಧ್ಯಕ್ಷ ಅಶೋಕ ಪಡಶೆಟ್ಟಿ, ಸುರೇಶ ದೇಶಪಾಂಡೆ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.